ಸೆ. 9 ರಿಂದ 19 ರವರೆಗೆ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ ಜಾತ್ರಾ ಮಹೋತ್ಸವ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಸೆ. 6 ಶನಿವಾರ ಹುಣ್ಣಿಮೆಯಿಂದ ಅಮವಾಸ್ಯೆಯವರೆಗೆ ಆಯೋಜಿಸಲಾಗಿದೆ ಎಂದು ಜಾತ್ರಾ ಮಹೋತ್ಸವದ ನೂತನ ಕಾರ್ಯಾಧ್ಯಕ್ಷ, ಜಿ.ಪಂ. ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅಮ್ಮನಘಟ್ಟ ದೇವಸ್ಥಾನದ ಸಭಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇದೇ ಸೆ.6ರ ಶನಿವಾರ ಹಳೇ ಅಮ್ಮನಘಟ್ಟದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ದೇವಿಗೆ ಕಂಕಣಕಟ್ಟಿ ವಿಶೇಷ ಪೂಜೆ ಸಲ್ಲಿಸಲಾಗುವುದು ಎಂದರು.

ಸೆ. 9ರ ಮಂಗಳವಾರದಿಂದ ಸೆ. 19ರ ಶುಕ್ರವಾರದವರೆಗೆ ಬರಲಿರುವ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಅಮ್ಮನಘಟ್ಟದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ಅಲ್ಲದೆ ಸೆ. 22 ರಿಂದ ಅ.2 ರವರಗೆ ನವರಾತ್ರಿ ಉತ್ಸವ ಹಾಗೂ ವಿಜಯದಶಮಿಯಂದು ದೇವಿಯ ಸನ್ನಿಧಿಯಲ್ಲಿ ಚಂಡಿಕಾ ಹೋಮ ಮತ್ತು ಸಾಮೂಹಿಕ ಅನ್ನಸಂತರ್ಪಣೆ ಜರುಗಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯವು ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್ ಇವರ ಅಧ್ಯಕ್ಷತೆಯಲ್ಲಿ ಜರುಗಲಿದೆ.

ಈ ದೇವಿಯ ಸನ್ನಿಧಿಯೂ ಮಾರುತಿಪುರ, ಕೋಡೂರು, ಮುಂಬಾರು, ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವುದರಿಂದ ಎಲ್ಲಾ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಚುನಾಯಿತ ಪ್ರತಿನಿಧಿಗಳು ಹಾಗೂ ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ಸರ್ವ ಸದಸ್ಯರ ನೇತೃತ್ವದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಉಪಸಮಿತಿಗಳನ್ನು ತಾತ್ಕಾಲಿಕವಾಗಿ ರಚಿಸಲಾಗಿದ್ದು ಗೌರವಾಧ್ಯಕ್ಷರಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಇವರನ್ನು ಆಯ್ಕೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ, ತಾಲ್ಲೂಕು ಪಂಚಾಯಿತ್ ಮಾಜಿ ಸದಸ್ಯ ಎರಗಿ ಉಮೇಶ್, ಜಯಪ್ರಕಾಶ್, ಗೌರಮ್ಮ, ನಾಗರಾಜ್, ಇನ್ನಿತರರು ಹಾಜರಿದ್ದರು.

Leave a Comment