ಹೊಸನಗರ

ಸೆ.17ರಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ

HOSANAGARA ; ಮಲೆನಾಡು ಭಾಗದ ಶಕ್ತಿದೇವತೆ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಸೆ.17ರಿಂದ ಆರಂಭಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಬಿ.ಸ್ವಾಮಿರಾವ್ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಅವರು ಕೋಡೂರು ಸಮೀಪದ ಅಮ್ಮನಘಟ್ಟದಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಮಲೆನಾಡು ಭಾಗದ ಜನರು ತಮ್ಮ ಬೆಳೆಗಳನ್ನು ಸಮರ್ಪಿಸುವ ಮೂಲಕ ಪ್ರತಿವರ್ಷ ಅಮ್ಮನಘಟ್ಟದಲ್ಲಿ ಹರಕೆ ಸಲ್ಲಿಸುತ್ತಾರೆ. ಸೆ.16ರಂದು ಹಳೆ ಅಮ್ಮನಘಟ್ಟದಲ್ಲಿ ಕಂಕಣ ಕಟ್ಟುವ ಮೂಲಕ ಜಾತ್ರೆಗೆ ಚಾಲನೆ ದೊರೆಯಲಿದೆ. ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಜಾತ್ರೆ ನಡೆಯಲಿದ್ದು, ನವರಾತ್ರಿಯಲ್ಲಿ ಪ್ರತಿದಿನವೂ ವಿಶೇಷ ಪೂಜೆ, ಉತ್ಸವ, ಅನ್ನಸಂತರ್ಪಣೆ ನಡೆಯಲಿದೆ. ವಿಜಯದಶಮಿಯಂದು ಚಂಡಿಕಾಹೋಮ ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ದೇವಸ್ಥಾನಕ್ಕೆ ನೂತನ ಶಿಲಾಮಯ ದೇವಸ್ಥಾನ ನಿರ್ಮಿಸುವ ಕಾರ‍್ಯ ನಡೆಯುತ್ತಿದೆ. ದಾನಿಗಳು, ಭಕ್ತಾದಿಗಳ ಸಹಕಾರದಿಂದ ಕೋಟ್ಯಂತರ ರೂ. ಕಾಮಗಾರಿ ನಡೆದಿದೆ. ಆಗಮಿಸುವ ಭಕ್ತಾದಿಗಳಿಗೆ ಸಮಸ್ಯೆ ಉಂಟಾಗದಂತೆ ತಾತ್ಕಾಲಿಕ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ ಎಂದರು.

ಅನುದಾನ ಬಿಡುಗಡೆಯಾಗಿಲ್ಲ:

ನೂತನ ದೇಗುಲ ಕಟ್ಟಡಕ್ಕೆ ಸುಮಾರು 5 ಕೋಟಿ ರೂ. ಅಗತ್ಯವಾಗಿದ್ದು, ಈಗಾಗಲೇ 1 ಕೋಟಿಯಷ್ಟು ಮೊತ್ತದ ಕಾಮಗಾರಿಗಳು ನಡೆದಿವೆ. ಆದರೆ ಮುಜರಾಯಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರನ್ನು ಖುದ್ದು ಭೇಟಿಯಾಗಿದ್ದು, ಅನುದಾನ ಬಿಡುಗಡೆ ಆಗುವ ವಿಶ್ವಾಸವಿದೆ. ಆದರೆ ಹಿಂದಿನ ವ್ಯವಸ್ಥಾಪನಾ ಸಮಿತಿಯವರು ಕಟ್ಟಡ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಿದ 16 ಲಕ್ಷ ರೂ.ಗಳನ್ನು ಅನದಿಕೃತವಾಗಿ ತಮ್ಮ ಬಳಿ ಇಟ್ಟುಕೊಂಡಿದ್ದು, ಕಟ್ಟಡ ನಿರ್ಮಾಣ ಕಾರ‍್ಯಕ್ಕೆ ನೀಡುತ್ತಿಲ್ಲ. ಭಕ್ತಾದಿಗಳ ದೇಣಿಗೆ ಹಣವನ್ನು ನಿಯಮಬಾಹಿರವಾಗಿ ಇಟ್ಟುಕೊಳ್ಳುವುದು ಸರಿಯಲ್ಲ. ಇದು ಹೀಗೆಯೇ ಮುಂದುವರೆದರೆ ಪ್ರತಿಭಟನೆ ಅನಿವಾರ‍್ಯವಾಗಲಿದೆ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇದಲ್ಲದೇ ವಿಶೇಷ ಅನುದಾನವಾಗಿ ಸರ್ಕಾರದಿಂದ 50 ಲಕ್ಷ ರೂ., ಸರ್ಕಾರದ ಖಜಾನೆಯಲ್ಲಿರುವ ದೇವಸ್ಥಾನಕ್ಕೆ ಸಂಬಂಧಿಸಿದ 10 ಲಕ್ಷ ರೂ. ಸಹಾ ಬಿಡುಗಡೆಯಾಗಿಲ್ಲ. ಹಣ ನಿಗದಿತ ಸಮಯದಲ್ಲಿ ಬಿಡುಗಡೆಯಾಗಿದ್ದರೆ, ಕಟ್ಟಡ ನಿರ್ಮಾಣ ಕಾರ‍್ಯ ಈ ವೇಳೆಗಾಗಲೇ ಮುಕ್ತಾಯಗೊಳ್ಳುತ್ತಿತ್ತು ಎಂದು ಅಸಮಧಾನ ವ್ಯಕ್ತಪಡಿಸಿದರು.

ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೆ.ಎಲ್ ಸುಧೀರ್, ಪುಟ್ಟಪ್ಪ, ಭಾಸ್ಕರ್ ಜೋಯ್ಸ್, ಕಟ್ಟಡ ಸಮಿತಿ ಸದಸ್ಯರಾದ ವಿಜೇಂದ್ರ ಭಟ್ ಮತ್ತಿತರರು ಇದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!