Ripponpete

ವಿಜೃಂಭಣೆಯಿಂದ ಜರುಗಿದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿ 2ನೇ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ ; ಸಮೀಪದ ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 2ನೇ ಜಾತ್ರಾ ಮಹೋತ್ಸವವು ಇಂದು ವಿಜೃಂಭಣೆಯಿಂದ ಜರುಗಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ದೇವಸ್ಥಾನದ ಪ್ರಧಾನ ಅರ್ಚಕ ಭಾಸ್ಕರ್‌ಜೋಯ್ಸ್ ನೇತೃತ್ವದಲ್ಲಿ ದೇವಿಗೆ ವಿಶೇಷ ಅಲಂಕಾರ, ಪೂಜಾ ಕೈಂಕರ್ಯದೊಂದಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನೆರವೇರಿತು.

ಸಾಗರ, ಹೊಸನಗರ, ತೀರ್ಥಹಳ್ಳಿ, ಸೇರಿದಂತೆ ಮಲೆನಾಡಿನ ವಿವಿಧ ಭಾಗದ ಈಡಿಗರು (ದೀವರು) ಸೇರಿದಂತೆ ನಾನಾ ಸಮುದಾಯದ ಆರಾಧ್ಯ ದೇವರಾದ ಶ್ರೀ ಜೇನುಕಲ್ಲಮ್ಮ ದೇವಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸುವ ಮೂಲಕ ಜಾತ್ರಾ ಮಹೋತ್ಸವವು ಅದ್ದೂರಿಯಾಗಿ ಜರುಗಿತು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>