Ripponpete

ಪಿಯು ರಿಸಲ್ಟ್ ; ಅಮೃತ ಸರ್ಕಾರಿ ಕಾಲೇಜ್‌ಗೆ ಶೇ. 98.07 ಫಲಿತಾಂಶ

ರಿಪ್ಪನ್‌ಪೇಟೆ ; ಪಿಯುಸಿ ಪರೀಕ್ಷೆ 1 ಫಲಿತಾಂಶ ಇಂದು ಪ್ರಕಟವಾಗಿದ್ದು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 98.07 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಕಲಾ ಮತ್ತು ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಿಂದ 156 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 154 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಶೇ. 98.07 ಫಲಿತಾಂಶ ಬಂದಿದೆ.

60 ಉನ್ನತ ಶ್ರೇಣಿ, 77 ಪ್ರಥಮ ದರ್ಜೆ, 14 ದ್ವಿತೀಯ ಹಾಗೂ 3 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ವಿಜ್ಞಾನ ವಿಭಾಗದಲ್ಲಿ ಇಂಚರ (581), ಪ್ರಜ್ವಿತ್ ಹೆಚ್.ಪಿ. (577), ವಾಣಿಜ್ಯ ವಿಭಾಗದಲ್ಲಿ ಹರ್ಷ (577), ಕಲಾ ವಿಭಾಗದಲ್ಲಿ ರಮ್ಯ (578) ಅಂಕ ಪಡೆಯುವುದರೊಂದಿಗೆ ಕಾಲೇಜ್‌ನ ಹಿರಿಮೆ ಹೆಚ್ಚಿಸಿದ್ದಾರೆ ಎಂದು ಪ್ರಾಚಾರ್ಯರು ತಿಳಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]