Ripponpete

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ; ಹುಲ್ಲಿನ ಬಣವೆ ಸುಟ್ಟು ಭಸ್ಮ !

RIPPONPETE ; ವಿದ್ಯುತ್‌ ತಂತಿಗಳ ಸ್ಪರ್ಷದಿಂದ ಕಿಡಿಗಳು ಉದುರಿ ಭತ್ತದ ಹುಲ್ಲಿನ ಬಣವೆ ಬಹುಪಾಲು ಭಸ್ಮವಾಗಿ ಭಾರಿ ನಷ್ಟ ಸಂಭವಿಸಿದ ಘಟನೆ ಅರಸಾಳು ಗ್ರಾ.ಪಂ. ವ್ಯಾಪ್ತಿಯ ಬಸವಾಪುರ ಗ್ರಾಮದ ಗುಂಡ್ರೂಮೂಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಉಮೇಶ್ ಆಚಾರ್ ಮತ್ತು ಪರಮೇಶ್ವರ ಎಂಬುವರಿಗೆ ಸೇರಿದ ಹುಲ್ಲಿನ ಬಣವೆ ಇದಾಗಿದೆ. ಹುಲ್ಲಿನ ಬಣವೆಯ ಮೇಲೆ ವಿದ್ಯುತ್‌ ತಂತಿಗಳು ಹಾದುಹೋಗಿದ್ದು, ಭಾರಿ ಗಾಳಿ ಬೀಸಿದ್ದರಿಂದ ತಂತಿಗಳು ಪರಸ್ಪರ ಸ್ಪರ್ಶವಾಗಿ ವಿದ್ಯುತ್‌ ಕಿಡಿಗಳು ಉದುರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1E6UoAgYm8/

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸ್ಥಳೀಯರ ಸಹಾಯದಿಂದ ಪಂಪ್‌ಸೆಟ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲಾಯಿತಾದರೂ ಸಾವಿರಾರು ರೂ. ಮೌಲ್ಯದ ಹುಲ್ಲು ಸುಟ್ಟು ಭಸ್ಮವಾಗಿದೆ.

ಘಟನೆ ನಡೆದ ಪಕ್ಕದಲ್ಲೇ ಕಬ್ಬು ಬೆಳೆಯಲಾಗಿದ್ದು ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಸ್ಥಳಕ್ಕೆ ಗ್ರಾ.ಪಂ. ಸದಸ್ಯ ದೇವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>