ಸಾಗರ: ಸಾಗರ ತಾಲೂಕಿನ ಆನಂದಪುರ ಸಮೀಪದ ಗಿಳಾಲಗುಂಡಿ ತಿರುವಿನಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಬಿಳಿ ಬಣ್ಣದ ಕಾರು ಹಾಗೂ ಶಿವಮೊಗ್ಗದಿಂದ ಆನಂದಪುರದ ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಕಾರಿನ ನಡುವೆ ಗಿಳಾಲಗುಂಡಿ ತಿರುವಿನಲ್ಲಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

