ಆನಂದಪುರ: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ – ಇಬ್ಬರು ಆರೋಪಿಗಳು ಬಂಧನ

Written by Koushik G K

Published on:

ಆನಂದಪುರ: ಆನಂದಪುರ ಬಸ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಬುಧವಾರ ನಡೆದಿದೆ. ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ವೊಂದು, ದ್ವಿಚಕ್ರ ವಾಹನವನ್ನು ಓವರ್‌ಟೇಕ್ ಮಾಡಿದ ಹಿನ್ನೆಲೆಯಲ್ಲಿ, ಮದ್ಯಪಾನ ಮಾಡಿದ್ದ ಇಬ್ಬರು ಆರೋಪಿಗಳು ಆಕ್ರೋಶಗೊಂಡು ಚಾಲಕ ಮೋಹನ್‌ ಅವರು ಪ್ರಯಾಣಿಕರನ್ನು ಇಳಿಸುತ್ತಿದ್ದ ವೇಳೆ ಅವರನ್ನು ಹಲ್ಲೆಗೊಳಿಸಿದ್ದಾರೆ.ಪ್ರವೀಣ್ ಹಾಗೂ ಜಗದೀಶ್ ಎಂಬವರನ್ನು ಬಂಧಿಸಲಾಗಿದೆ.

ಈ ಹಲ್ಲೆಯ ಪರಿಣಾಮ ಚಾಲಕ ಮೋಹನ್ ಅವರ ಕೈಗೆ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕನಿಗೆ ಅಡ್ಡಿಯುಂಟುಮಾಡಿದ ಕಾರಣ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೆತ್ತಲಾಗಿದೆ.ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ

Read more

ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ ; ತಡೆಗಟ್ಟುವಲ್ಲಿ ವಿಫಲರಾದ ಅಧಿಕಾರಿಗಳು

Leave a Comment