ಹೊಸನಗರ : ಇತ್ತೀಚೆಗೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ರಾಷ್ಟ್ರಪಿತ ಮಹಾತ್ಮಗಾಂಧಿ ಅವರ 156ನೇ ಜನ್ಮ ದಿನಾಚರಣೆ ಅಂಗವಾಗಿ ಶಿವಮೊಗ್ಗದ ಬಾಪೂಜಿ ಪ್ರಥಮದರ್ಜೆ ಕಾಲೇಜು ಅವರಣದಲ್ಲಿ ಜಿಲ್ಲೆಯ 18 ಕಾಲೇಜುಗಳ 36 ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಹೊಸನಗರ ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಜಿ.ಪಿ.ಅನನ್ಯ ಪ್ರಥಮ ಸ್ಥಾನಕ್ಕೆ ಭಾಜನರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿಗೆ ಕೀರ್ತಿ ತಂದಿದ್ದಾಳೆ. ಇವಳ ಸಾಧನೆಯನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಭಿನಂದಿಸಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.