ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಂದ ಬೆಂಗಳೂರು ಚಲೋ

Written by malnadtimes.com

Published on:

HOSANAGARA ; ತಾಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಮ್ಮ ಅನುದಿನದ ಬೇಡಿಕೆಗಳಿಗಾಗಿ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಾಲೂಕಾಧ್ಯಕ್ಷೆ ಶಶಿಕಲಾ ಸಿ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ರಾಜ್ಯ ಸಮಿತಿ ಸಂಚಾಲಕ ಎನ್ ರವೀಂದ್ರ ಸಾಗರ ಅಧ್ಯಕ್ಷತೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಅಂಗನವಾಡಿಗಳನ್ನು ಉಳಿಸಿ ಅಂಗನವಾಡಿಗಳನ್ನ ಬಲಪಡಿಸಬೇಕೆಂಬ ಘೋಷಣೆಯಡಿ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು ಸರ್ಕಾರ ಅಧಿಕೃತ ತೀರ್ಮಾನ ಕೈಗೊಂಡಿದ್ದು ಸರ್ಕಾರ ಇದಕ್ಕೆ ಸೂಕ್ತ ಅನುದಾನ ಬಿಡುಗಡೆ ಮಾಡುವುದು ಹಾಗೂ ಎಲ್ಲಾ ಅಂಗನವಾಡಿ ನೌಕರರಿಗೆ ಗ್ರಾಚ್ಯುಟಿ ನೀಡಬೇಕು ಹಾಗೂ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಿಸಬೇಕು ಮತ್ತು ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಸರಬರಾಜು ಮಾಡಬೇಕೆಂದು ಸರಕಾರದ ಗಮನ ಸೆಳೆಯುವ ಒತ್ತಾಯಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ 19 ರಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ಅವರು ತಿಳಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೌಷ್ಟಿಕ ಆಹಾರಗಳು ಕಳಪೆ ಗುಣಮಟ್ಟದಿಂದ ಕೂಡಿದ್ದಾಗಿದ್ದು ಈ ಬಗ್ಗೆ ಅಂಗನವಾಡಿ ಕೇಂದ್ರಗಳಿಂದ ವ್ಯಾಪಕ ದೂರುಗಳು ಬಂದಿದ್ದು ಗುಣಮಟ್ಟದ ಪೌಷ್ಟಿಕ ಆಹಾರ ನೀಡಬೇಕು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಆಯ್ಕೆ ಸಂದರ್ಭ ಈಗಿರುವ ವಯೋಮಿತಿಯನ್ನು ಸಡಿಲಿಸಿ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 40 ವರ್ಷ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 38 ವರ್ಷಗಳ ನಿಗದಿ ಮಾಡಬೇಕೆಂದು ಅವರು ಒತ್ತಾಯಿಸಿದರು.

6 ವರ್ಷದೊಳಗಿನ ಮಕ್ಕಳು ಬಾಣಂತಿಯರು ಗರ್ಭಿಣಿಯರಲ್ಲಿ ಅಪೌಷ್ಟಿಕತೆ ರಕ್ತ ಹೀನತೆ, ನಿವಾರಣೆ ಸಾಧ್ಯವಾಗಿದೆ ಮತ್ತು ಮಕ್ಕಳ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಪೂರಕವಾಗಿ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ ಇಂತಹ ಮಾತೃ ಯೋಜನೆಯನ್ನು ಮತ್ತಷ್ಟು ಬಲಗೊಳಿಸಿ ಅಂಗನವಾಡಿ ವ್ಯವಸ್ಥೆಯನ್ನು ಉಳಿಸಿ ಬೆಳೆಸಬೇಕಾದ ಅನಿವಾರ್ಯತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರಮುಖ ಅಂಗನವಾಡಿ ಸಂಘಟನೆಗಳು ಸರ್ಕಾರದ ಗಮನ ಸೆಳೆಯಲು ರಾಜ್ಯದಾದ್ಯಂತದ ಕಾರ್ಯಕರ್ತರು ಹೋರಾಟಕ್ಕೆ ಸನ್ನದ್ಧರಾಗಿದ್ದು ನಮ್ಮ ಮೂಲಭೂತ ಬೇಡಿಕೆಗಳಾದ ಗ್ರಾಚ್ಯುಟಿ ಸೌಲಭ್ಯ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಮಾಸಿಕ 15 ಸಾವಿರ ರೂ. ಹಾಗೂ ಸಹಾಯಕಿಯರಿಗೆ 10 ಸಾವಿರ ರೂ. ಗೌರವಧನ ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಜಯಮ್ಮ, ಪ್ರಧಾನ ಕಾರ್ಯದರ್ಶಿ ಲೀಲಾವತಿ, ಕಾರ್ಯದರ್ಶಿ ಗೀತಾ, ಖಜಾಂಚಿ ಉಮಾ, ಸತ್ಯ, ನಾಗರತ್ನ, ಸುಜಾತ, ಗಾಯತ್ರಿ, ವೀಣಾ, ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment