ಶಿವಮೊಗ್ಗ

ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್

<p>ಶಿವಮೊಗ್ಗ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘವು ವಿವಿಧ ಬೇಡಿಕೆಗಳ ಹಿನ್ನೆಲೆಯಲ್ಲಿ ಆಗಸ್ಟ್ 10ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಒಂದು ದಿನದ ಮುಷ್ಕರ ನಡೆಸಲಾಗುವುದು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಬಿ. ಪ್ರೇಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಗಸ್ಟ್ 10ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಆರಂಭವಾಗಲಿದ್ದು, ಜಿಲ್ಲೆಯ ವಿವಿಧ … <a title="ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್; ಡಿಸಿ ಕಚೇರಿ ಎದುರು ಪ್ರತಿಭಟನೆ" class="read-more" href="https://malnadtimes.com/?p=19868" aria-label="Read more about ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್; ಡಿಸಿ ಕಚೇರಿ ಎದುರು ಪ್ರತಿಭಟನೆ">Read more</a></p>

ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಬಂದ್ – InShot 20260809 103746209

ಶಿವಮೊಗ್ಗ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ವತಂತ್ರ ಸಂಘವು ವಿವಿಧ ಬೇಡಿಕೆಗಳ ಹಿನ್ನೆಲೆಯಲ್ಲಿ ಆಗಸ್ಟ್ 10ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

WhatsApp Group Join Now
Telegram Group Join Now
Instagram Group Join Now

ಪ್ರತಿಭಟನೆಯ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಒಂದು ದಿನದ ಮುಷ್ಕರ ನಡೆಸಲಾಗುವುದು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಬಿ. ಪ್ರೇಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 10ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಆರಂಭವಾಗಲಿದ್ದು, ಜಿಲ್ಲೆಯ ವಿವಿಧ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಭಾಗವಹಿಸಲಿದ್ದಾರೆ.

ಒಂದು ದಿನದ ಮುಷ್ಕರಕ್ಕೆ ಕರೆ ನೀಡಿರುವ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಕೇಂದ್ರಗಳ ಕಾರ್ಯಚಟುವಟಿಕೆ ಸೋಮವಾರ ಸ್ಥಗಿತಗೊಳ್ಳಲಿದೆ ಎಂದು ಸಂಘ ತಿಳಿಸಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

error: Content is protected !!