ಹೊಸನಗರ

ಡಿ.12ರಂದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಂದ ಬೆಳಗಾವಿ ಚಲೋ

HOSANAGARA ; ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಅಂಗನವಾಡಿಗಳನ್ನು ಉಳಿಸಿ ಅಂಗನವಾಡಿಗಳನ್ನು ಬಲಪಡಿಸಿ ಎಂಬ ಘೋಷಣೆಯೊಂದಿಗೆ ಡಿಸೆಂಬರ್ 12ರಂದು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರದ ವಿರುದ್ಧ ಬೆಳಗಾವಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರ ರಾಜ್ಯ ಸಂಚಾಲಕ ರವೀಂದ್ರ ಸಾಗರ್‌ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಅವರು ಅಂಗನವಾಡಿ ಕಾರ್ಯಾಲಯದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ, ಕಳೆದ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವುದಾಗಿ ಘೋಷಿಸಲಾಗಿತ್ತು. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರೂ ಗೌರವಧನ ಹೆಚ್ಚಿಸುವ 6ನೇ ಗ್ಯಾರಂಟಿ ಜಾರಿಗೊಳಿಸಿರುವುದಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ನುಡಿದಂತೆ ಕಾರ್ಯಕರ್ತೆಯರಿಗೆ ಮಾಸಿಕ 15 ಸಾವಿರ ರೂ. ಹಾಗೂ ಸಹಾಯಕಿಯರಿಗೆ 10 ಸಾವಿರ ರೂ. ಹೆಚ್ಚಿಸಬೇಕು. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹರು ಎಂಬುದಾಗಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಂತೆ ಕರ್ತವ್ಯಕ್ಕೆ ಸೇರಿ ನಿವೃತ್ತರಾಗಿರುವ ಎಲ್ಲರಿಗೂ ಗ್ರಾಚ್ಯುಟಿ ನೀಡಬೇಕು ಎಂದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತಮ್ಮ ಬೇಡಿಕೆಗಳಾದ ಗ್ರಾಚ್ಯುಟಿ ಸೌಲಭ್ಯ ಗೌರವಧನ ಹೆಚ್ಚಿಸಿ (ಕನಿಷ್ಠ ವೇತನ) ಇಡುಗಂಟು ನೀಡುವ ಯೋಜನೆ ಜಾರಿಗೆ ಆಗ್ರಹಿಸಲಾಗುವುದು. ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌ಕೆಜಿ, ಯುಕೆಜೆ ಪ್ರಾರಂಭಿಸುವ, ಗುಣಮಟ್ಟದ ಪೌಷ್ಠಿಕ ಆಹಾರ ಸರಬರಾಜು ಮಾಡಲು ಆಗ್ರಹಿಸಲಾಗುವುದು. ನೇಮಕಾತಿ ವಯೋಮಿತಿ ಸಡಿಲಿಸಬೇಕೆಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಯ್ಕೆ ಮಾಡುವಾಗ ಈಗಿರುವ ವಯೋಮಿತಿಯನ್ನು ಸಡಿಲಿಸಿ ಎಸ್.ಸಿ, ಎಸ್.ಟಿ ಅಭ್ಯರ್ಥಿಗಳಿಗೆ 40 ವರ್ಷ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ ಹೆಚ್ಚಳ ಮಾಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಕೂಲಂಕುಶವಾಗಿ ಪರಿಶೀಲಿಸಿ ಈಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಹೊಸನಗರ ತಾಲ್ಲೂಕಿನಲ್ಲಿ ಸುಮಾರು ಐದನೂರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿದ್ದು ಅವರೆಲ್ಲರೂ ಡಿಸೆಂಬರ್ 12ರಂದು ನಡೆಯುವ ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಒಗ್ಗಟ್ಟಿನಿಂದ ಬಾಗವಹಿಸಲಿದ್ದಾರೆ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಹೊಸನಗರ ತಾಲ್ಲೂಕಿನಲ್ಲಿ ಸುಮಾರು 500ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿದ್ದು ಅವರೆಲ್ಲರೂ ಡಿಸೆಂಬರ್ 12ರಂದು ನಡೆಯುವ ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಒಗ್ಗಟ್ಟಿನಿಂದ ಭಾಗವಹಿಸಲಿದ್ದಾರೆ ಎಂದರು.

ಈ ಪತ್ರಿಕಾಘೋಷ್ಠಿಯಲ್ಲಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರ ಅಧ್ಯಕ್ಷೆ ಶಶಿಕಲಾ, ಪ್ರಧಾನ ಕಾರ್ಯದರ್ಶಿ ಲೀಲಾವತಿ, ಕಾರ್ಯದರ್ಶಿ ಗೀತಾ, ಜಯಮ್ಮ, ನಾಗರತ್ನ, ಮಮ್ತಾಜ್, ಉಮಾ, ಸುಜಾತ, ಗಾಯಿತ್ರಿ, ವೀಣಾ, ಜಯಮ್ಮ, ಫಾರೀದ, ಶಕುಂತಲಾ, ಶಾರ್ಮಿಳ, ಮೂಕಾಂಬಿಕ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]