ಹೊಸನಗರ ; ಇದೇ 2025ನೇ ಜನವರಿ 23ರ ಗುರುವಾರ ತಾಲ್ಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯಲ್ಲಿ ಶ್ರೀ ಮಾರಿಕಾಂಬಾ ದೇವಿಯ 2ನೇ ವರ್ಷದ ವರ್ಧಂತ್ಯೋತ್ಸವ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ.
ಸದಾನಂದ ಶಿವಯೋಗ ಆಶ್ರಯ ಮೂಲೆಗದ್ದೆ ಮಠದ ಶ್ರೀ ಚನ್ನಬಸವ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದು, ಹಾಲಾಡಿ, ತಟ್ಟುವಟ್ಟಿನ ವಿದ್ವಾನ್ ಶ್ರೀ ಟಿ. ವಾಸುದೇವ ಜೋಯಿಸ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ಭಕ್ತಾದಿಗಳಿಗಾಗಿ ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ಭದ್ರಾವತಿ ಸ್ನೇಹ ಮೆಲೋಡಿಸ್ ಅವರಿಂದ ಆರ್ಕೆಸ್ಟ್ರಾ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಎನ್. ಪ್ರವೀಣ್ ಕೋರಿದ್ದಾರೆ.
ಜ.29ಕ್ಕೆ ಮೇಲಿನಬೆಸಿಗೆ ಶಾಲೆಯಲ್ಲಿ ನೃತ್ಯ ಸೌರಭ
ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಉತ್ಸವ ಜನವರಿ 29ರ ಬುಧವಾರ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 10-30ಕ್ಕೆ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಬಿ.ಕೆ.ಸುರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ಮಕ್ಕಳಿಗೆ ಬಹುಮಾನ ವಿತರಿಸಲಿದ್ದು, ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಉಪಾಧ್ಯಕ್ಷೆ ಪೂರ್ಣಿಮಾ, ಸದಸ್ಯರಾದ ಜ್ಯೋತಿ, ಚಂದ್ರಕಲಾ, ಲಕ್ಷ್ಮಣಗೌಡ, ಲಕ್ಷ್ಮೀದೇವಿ, ರಾಜೇಶ್ ಮೂರ್ತಿ, ನಾಗರಾಜ್, ಧರ್ಮಪ್ಪ, ಶಾಂತಪಾಂಡು, ಬಿಇಒ ಕೃಷ್ಣಮೂರ್ತಿ, ಸಮನ್ವಯಾಧಿಕಾರಿ ರಂಗನಾಥ, ಪಿ.ಎಂ. ಪೋಷಣ್ ಸಹಾಯಕ ನಿರ್ದೇಶಕ ಶೇಷಾಚಲ ನಾಯಕ್, ದೈಹಿಕ ಪರಿವೀಕ್ಷಕ ಬಾಲಚಂದ್ರರಾವ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಶಾಲಾ ಮುಖ್ಯ ಶಿಕ್ಷಕ ಧರ್ಮಪ್ಪ ಕೋರಿದ್ದಾರೆ.