ಸಾಗರದ ಬಳಿ ಇಂದು ಮತ್ತೊಂದು ಬಸ್ ಅಪಘಾತ !

Written by malnadtimes.com

Published on:

SAGARA | ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು (Ulluru) ಬಳಿ ಮತ್ತೊಂದು ಬಸ್‌ (Bus) ಅಪಘಾತವಾಗಿದೆ.

WhatsApp Group Join Now
Telegram Group Join Now
Instagram Group Join Now

Read More:Hosanagara Rain | ಹುಲಿಕಲ್ಲಿನಲ್ಲಿ ಅತ್ಯಧಿಕ 96 ಮಿ.ಮೀ. ಮಳೆ ದಾಖಲು, ಮತ್ತೆಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

ಮೊನ್ನೆಯಷ್ಟೆ ಇಲ್ಲಿನ ಮುಂಬಾಳು ತಿರುವಿನಲ್ಲಿ ಜೆಆರ್‌ಬಿ ಎಂಬ ಖಾಸಗಿ ಬಸ್‌ ಅಪಘಾತಕ್ಕೀಡಾಗಿತ್ತು. ಇವತ್ತು ಇನ್ನೊಂದು ಘಟನೆ ಸಂಭವಿಸಿದ್ದು, ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಪ್ರಾಣಹಾನಿಯಾಗಿಲ್ಲ.

ಉಳ್ಳೂರು ಹತ್ತಿರದ ತಿರುವಿನಲ್ಲಿ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಚಾಲಕನಿಗೆ ಗಾಯಗಳಾಗಿದ್ದು, ಆತನನ್ನು ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೂ ಬಸ್‌ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದು ಎಲ್ಲರೂ ಸುರಕ್ಷಿತರಾಗಿದ್ದಾರೆ.

ಘಟನಾ ಸ್ಥಳಕ್ಕೆ ಸಾಗರದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ವಾಹನಗಳನ್ನ ತೆರವುಗೊಳಿಸಿದ್ದಾರೆ.

Read More:Gruhalakshmi Scheme | ಈ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಕ್ರೆಡಿಟ್

Leave a Comment