Chikmagaluru News

ಕಾಫಿನಾಡಿನಲ್ಲಿ ಮತ್ತೊಂದು ಕೆಎಫ್‌ಡಿ ಪ್ರಕರಣ ಪತ್ತೆ !

ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) 2ನೇ ಪ್ರಕರಣ ಕಾಣಿಸಿಕೊಂಡಿದ್ದು, ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದ 46 ವರ್ಷದ ಪುರುಷನಲ್ಲಿ ಕಾಣಿಸಿಕೊಂಡಿದ್ದು ಕೊಪ್ಪ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಇತ್ತೀಚೆಗೆ ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಗ್ರಾಮದಲ್ಲಿನ 26 ವರ್ಷದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸೋಂಕು ಕಾಣಿಸಿಕೊಂಡಿರುವ ವ್ಯಕ್ತಿ ಸೇರಿದಂತೆ ಈ ವರ್ಷದಲ್ಲಿ ಎರಡು ಕೆಎಫ್‌ಡಿ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಇಬ್ಬರೂ ಚೇತರಿಸಿಕೊಂಡಿದ್ದಾರೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ತಿಳಿಸಿದ್ದಾರೆ.

ಕೆಎಫ್‌ಡಿ ಸೋಂಕು ಕಾಣಿಸಿಕೊಂಡ ಗ್ರಾಮಗಳ ಸುತ್ತಮುತ್ತಲು ಆರೋಗ್ಯ ಇಲಾಖೆ ಮುಂಜಾಗೃತ ಕ್ರಮವಹಿಸಿದೆ. ಆರೋಗ್ಯ ತಪಾಸಣೆ, ಜನರು ಕಾಡಿಗೆ ತೆರಳುವಾಗ ಔಷಧ ಬಳಕೆ ಮಾಡುವಂತೆ ತಿಳುವಳಿಕೆಯನ್ನು ನೀಡಲಾಗಿದೆ. ಒಟ್ಟಾರೆ ಕೆಲವೇ ದಿನಗಳ ಅಂತರದಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು ಜನತೆಯಲ್ಲಿ ಆತಂಕ ಮೂಡಿಸಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇನ್ನೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಭಾಗದಲ್ಲಿ 63 ವರ್ಷದ ವ್ಯಕ್ತಿಗೆ ಇತ್ತೀಚೆಗೆ ಕೆಎಫ್‌ಡಿ ಪಾಸಿಟಿವ್ ಬಂದಿದ್ದು ಇದು ಈ ವರ್ಷದ ಮೊದಲ ಪ್ರಕರಣವಾಗಿತ್ತು.

ಕಳೆದ‌ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿತ್ತು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!