ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಕೆಎಫ್‌ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) 2ನೇ ಪ್ರಕರಣ ಕಾಣಿಸಿಕೊಂಡಿದ್ದು, ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲ್ಪಾಲ್ ಗ್ರಾಮದ 46 ವರ್ಷದ ಪುರುಷನಲ್ಲಿ ಕಾಣಿಸಿಕೊಂಡಿದ್ದು ಕೊಪ್ಪ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತೀಚೆಗೆ ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಗ್ರಾಮದಲ್ಲಿನ 26 ವರ್ಷದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದ್ದು ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸೋಂಕು ಕಾಣಿಸಿಕೊಂಡಿರುವ ವ್ಯಕ್ತಿ ಸೇರಿದಂತೆ ಈ ವರ್ಷದಲ್ಲಿ ಎರಡು ಕೆಎಫ್‌ಡಿ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಇಬ್ಬರೂ ಚೇತರಿಸಿಕೊಂಡಿದ್ದಾರೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ತಿಳಿಸಿದ್ದಾರೆ.
ಕೆಎಫ್‌ಡಿ ಸೋಂಕು ಕಾಣಿಸಿಕೊಂಡ ಗ್ರಾಮಗಳ ಸುತ್ತಮುತ್ತಲು ಆರೋಗ್ಯ ಇಲಾಖೆ ಮುಂಜಾಗೃತ ಕ್ರಮವಹಿಸಿದೆ. ಆರೋಗ್ಯ ತಪಾಸಣೆ, ಜನರು ಕಾಡಿಗೆ ತೆರಳುವಾಗ ಔಷಧ ಬಳಕೆ ಮಾಡುವಂತೆ ತಿಳುವಳಿಕೆಯನ್ನು ನೀಡಲಾಗಿದೆ. ಒಟ್ಟಾರೆ ಕೆಲವೇ ದಿನಗಳ ಅಂತರದಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು ಜನತೆಯಲ್ಲಿ ಆತಂಕ ಮೂಡಿಸಿದೆ.
ಇನ್ನೂ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಭಾಗದಲ್ಲಿ 63 ವರ್ಷದ ವ್ಯಕ್ತಿಗೆ ಇತ್ತೀಚೆಗೆ ಕೆಎಫ್‌ಡಿ ಪಾಸಿಟಿವ್ ಬಂದಿದ್ದು ಇದು ಈ ವರ್ಷದ ಮೊದಲ ಪ್ರಕರಣವಾಗಿತ್ತು.
ಕಳೆದ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿತ್ತು.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.