ಮಲೆನಾಡಿನಲ್ಲಿ ಮತ್ತೊಂದು ಮಂಗನ ಕಾಯಿಲೆ ಪ್ರಕರಣ ಪತ್ತೆ !

Written by Mahesha Hindlemane

Published on:

ನ.ರಾ.ಪುರ ; ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಕೆಎಫ್‌ಡಿ (ಮಂಗನ ಕಾಯಿಲೆ) ಪ್ರಕರಣ ಪತ್ತೆಯಾಗಿದ್ದು 30 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನರಸಿಂಹರಾಜಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಈ ವರ್ಷ ಇಬ್ಬರಲ್ಲಿ ಮಂಗನ ಕಾಯಿಲೆ ದೃಢವಾಗಿದ್ದು, ಇನ್ನೋರ್ವ ವ್ಯಕ್ತಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಲ ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಳ್ಳೋಡಿ ಗ್ರಾಮದ 6 ಜನರಿಗೆ ಮಂಗನ ಕಾಯಿಲೆ ಪತ್ತೆಯಾಗಿತ್ತು. ಇದೀಗ ಕಾಫಿನಾಡಿನಲ್ಲಿ ಮಂಗನ ಕಾಯಿಲೆ ಸೋಂಕು ಕಂಡುಬಂದಿದೆ.

Leave a Comment