ನ.ರಾ.ಪುರ ; ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಕೆಎಫ್‌ಡಿ (ಮಂಗನ ಕಾಯಿಲೆ) ಪ್ರಕರಣ ಪತ್ತೆಯಾಗಿದ್ದು 30 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ.
ನರಸಿಂಹರಾಜಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಈ ವರ್ಷ ಇಬ್ಬರಲ್ಲಿ ಮಂಗನ ಕಾಯಿಲೆ ದೃಢವಾಗಿದ್ದು, ಇನ್ನೋರ್ವ ವ್ಯಕ್ತಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಕೆಲ ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಳ್ಳೋಡಿ ಗ್ರಾಮದ 6 ಜನರಿಗೆ ಮಂಗನ ಕಾಯಿಲೆ ಪತ್ತೆಯಾಗಿತ್ತು. ಇದೀಗ ಕಾಫಿನಾಡಿನಲ್ಲಿ ಮಂಗನ ಕಾಯಿಲೆ ಸೋಂಕು ಕಂಡುಬಂದಿದೆ.

