ಹೊಸನಗರ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂಗೆ ಮನವಿ

ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ, ಹೊಸನಗರದ ನಿವಾಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸುಹಾನ್ ಅಲಿ ಅವರು ಚಿಕ್ಕಮಗಳೂರಿನ ಎನ್.ಆರ್. ಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಸಿಎಂಗೆ ಮನವಿಯಲ್ಲಿ ಅವರು, 2008ರಲ್ಲಿ ಹೊಸನಗರ ತಾಲೂಕು ತನ್ನ ವಿಧಾನಸಭಾ ಕ್ಷೇತ್ರವನ್ನು ಕಳೆದುಕೊಂಡ ಬಳಿಕ ಕಳೆದ 18 ವರ್ಷಗಳಿಂದ ಅಭಿವೃದ್ಧಿ ಹಿನ್ನಡೆ ಅನುಭವಿಸುತ್ತಿದೆ ಎಂದು ಆಕ್ಷೇಪಿಸಿದ್ದಾರೆ. ಇತರ ರಾಜ್ಯಗಳಲ್ಲಿ ಕೇವಲ 10ರಿಂದ 15 ಸಾವಿರ ಮತದಾರರಿದ್ದರೂ ಪ್ರತ್ಯೇಕ ಕ್ಷೇತ್ರಗಳಿರುವುದನ್ನು ಉದಾಹರಿಸಿದ ಅವರು, ಹೊಸನಗರದಲ್ಲಿ 1 ಲಕ್ಷಕ್ಕೂ ಹೆಚ್ಚು ಮತದಾರರು ಹಾಗೂ ಸುಮಾರು 175 ಕಿ.ಮೀ ವ್ಯಾಪ್ತಿಯ ಭೌಗೋಳಿಕ ವಿಸ್ತೀರ್ಣ ಇದ್ದರೂ ಕ್ಷೇತ್ರವಿಲ್ಲದಿರುವುದು ಅನ್ಯಾಯಕರವಾಗಿದೆ ಎಂದು ತಿಳಿಸಿದ್ದಾರೆ.

ಕ್ಷೇತ್ರ ಮರುಸ್ಥಾಪನೆಗಾಗಿ ಇದೇ ತಿಂಗಳ 5 ಮತ್ತು 6ರಂದು ಮಾಜಿ ಶಾಸಕ, 96 ವರ್ಷದ ಹಿರಿಯ ರಾಜಕಾರಣಿ ಬಿ. ಸ್ವಾಮಿರಾವ್ ಅವರ ನೇತೃತ್ವದಲ್ಲಿ ಸಾಗರ ಮತ್ತು ತೀರ್ಥಹಳ್ಳಿ ಕ್ಷೇತ್ರಗಳ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ 45 ಕಿ.ಮೀ. ಪಾದಯಾತ್ರೆ ನಡೆದಿದ್ದು, ಸಾವಿರಾರು ಜನರು ಜಾತಿ-ಧರ್ಮ ಭೇದವಿಲ್ಲದೆ ಭಾಗವಹಿಸಿರುವುದು ಗಮನಾರ್ಹವಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇದೇ ವಿಚಾರವಾಗಿ ತಾಲ್ಲೂಕಿನ ಜನಪ್ರತಿನಿಧಿಗಳು ಪ್ರಧಾನಮಂತ್ರಿ ನರೇಂದ್ರ ಮೋದಿ, ಸಂಸದರು ಹಾಗೂ ಜಿಲ್ಲಾಧಿಕಾರಿಗಳಿಗೆ ಸಹ ಪತ್ರ ಬರೆದಿರುವುದಾಗಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರು ಸಂಬಂಧಪಟ್ಟ ಸಮಿತಿಗೆ ಶಿಫಾರಸು ಮಾಡಿ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]