Ripponpete

ಅರಸಾಳು ರೈಲ್ವೆ ನಿಲ್ದಾಣದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಕಾರ್ಮಿಕ ಪರಿಷತ್ ಸಂಸದರಿಗೆ ಮನವಿ

ರಿಪ್ಪನ್‌ಪೇಟೆ : ಮಲೆನಾಡಿನ ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಭದ್ರತಾ ಸಮಸ್ಯೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಮತ್ತು ಮಹಿಳಾ ಘಟಕದ ಅಧ್ಯಕ್ಷೆ ವೇದಾವತಿ ಅವರು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರರನ್ನು ಭೇಟಿ ಮಾಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಅರಸಾಳು ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯಗಳಿಗೆ ನೀರಿನ ಸರಬರಾಜು ಇಲ್ಲದಿರುವುದು ಮತ್ತು ಅವು ಅತ್ಯಂತ ಅಶುಚಿತವಾಗಿರುವುದು ಪ್ರಮುಖ ಸಮಸ್ಯೆಯಾಗಿದ್ದು, ಕುಡಿಯುವ ನೀರಿನ ವ್ಯವಸ್ಥೆಯ ಕೊರತೆಯೂ ಪ್ರಯಾಣಿಕರಿಗೆ ತೊಂದರೆ ಸೃಷ್ಟಿಸುತ್ತಿದೆ. ವಿಶೇಷವಾಗಿ ರಾತ್ರಿ ವೇಳೆ ರಾಜಧಾನಿ ಬೆಂಗಳೂರು-ಮೈಸೂರು ಇಂಟರ್ ಸಿಟಿ ರೈಲು ನಿಲ್ದಾಣದಲ್ಲಿ ಸರಿಯಾದ ವಿದ್ಯುತ್ ವ್ಯವಸ್ಥೆಯ ಕೊರತೆಯಿಂದ ಮಹಿಳೆಯರು ಮತ್ತು ಇತರ ಪ್ರಯಾಣಿಕರು ಕತ್ತಲಿನಲ್ಲಿ ರೈಲು ಹತ್ತಲು ಮತ್ತು ಇಳಿಯಲು ಸಂಕಷ್ಟ ಎದುರಿಸುತ್ತಿದ್ದಾರೆ.

ಅರಣ್ಯ ಪ್ರದೇಶದ ಹತ್ತಿರ ಇರುವ ಈ ನಿಲ್ದಾಣದ ಹಳಿಯ ರೈಲು ಹತ್ತಿರದ ಪ್ರದೇಶದಲ್ಲಿ ಕೆಲ ತಿಂಗಳ ಹಿಂದೆ ಆನೆಗಳ ಹಿಂಡು ಕಾಣಿಸಿಕೊಂಡಿದ್ದು, ಮತ್ತೊಂದು ಭಯಕರ ಅಂಶವಾಗಿ ರಾತ್ರಿ ವೇಳೆ ಹುಳು-ಹಪ್ಪಟ್ಟೆಗಳು ಪ್ರಯಾಣಿಕರ ಭಯವನ್ನು ಹೆಚ್ಚಿಸುತ್ತಿವೆ. ಈ ಎಲ್ಲಾ ಅನಾವಶ್ಯಕ ಸಂಕಷ್ಟಗಳು ಪ್ರಯಾಣಿಕರ ಸುರಕ್ಷತೆ ಮತ್ತು ಅನುಕೂಲತೆಗೆ ತೊಂದರೆ ನೀಡುತ್ತಿದ್ದು, ಅವುಗಳ ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಕಾರ್ಮಿಕ ಪರಿಷತ್ ಮುಖಂಡರು ಒತ್ತಾಯಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸಂಸದ ಬಿ.ವೈ. ರಾಘವೇಂದ್ರ ಈ ಮನವಿಯನ್ನು ಸ್ವೀಕರಿಸಿ ನಿಲ್ದಾಣದ ಮೂಲಭೂತ ಸೌಲಭ್ಯಗಳ ಸುಧಾರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಳ್ಳುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಾರ್ಮಿಕ ಪರಿಷತ್ ಸದಸ್ಯರಾದ ಸೀತಮ್ಮ, ರಾಜಪ್ಪ, ಕೆ. ಸುಶೀಲ ಮುಡಾಗ್ರೆ ಮತ್ತು ಇತರರು ಸಹ ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]