HOSANAGARA | 2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (MGNREGA) ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗೆ, ನೀರಾವರಿ ಸೌಲಭ್ಯ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ, ಜಾಬ್ ಕಾರ್ಡ್ ಹೊಂದಿರುವ ಅರ್ಹ ರೈತ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು ?
ಸಾಮಾನ್ಯ ರೈತರಿಗೆ, ಸಣ್ಣ/ಅತಿ ಸಣ್ಣ ರೈತರ ಪ್ರಮಾಣ ಪತ್ರ, BPL ಕಾರ್ಡ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಜಾತಿ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯವಾಗಿದೆ.
ಯಾವೆಲ್ಲ ಬೆಳೆಗಳನ್ನು ಬೆಳೆಯಬಹುದು ?
ಅಡಿಕೆ, ಗೇರು, ಜಾಯಿಕಾಯಿ, ಕೋಕೋ, ತೆಂಗು, ಲವಂಗ ಮತ್ತು ತಾಳೆ ಬೆಳೆಯನ್ನು ಬೆಳೆಯಲು ಅವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಅಥವಾ ಈ ಕೆಳಕಂಡ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಂಪರ್ಕಿಸಲು ಕೋರಲಾಗಿದೆ.
- ಕಸಬಾ ಹೋಬಳಿ : 8867621856
- ಕೆರೆಹಳ್ಳಿ ಹೋಬಳಿ : 9481501571
- ಹುಂಚ ಮತ್ತು ನಗರ ಹೋಬಳಿ : 6006338189