THIRTHAHALLI | ತೋಟಗಾರಿಕೆ ಬೆಳೆಗಳ ಸಹಾಯ ಧನಕ್ಕೆ ಅರ್ಜಿ ಆಹ್ವಾನ

Written by malnadtimes.com

Published on:

THIRTHAHALLI | 2024-25ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಕೂಲಿ ಮತ್ತು ಸಾಮಾಗ್ರಿ ವೆಚ್ಚ ನೀಡಲಾಗುತ್ತಿದ್ದು, ನೀರಾವರಿ ಸೌಲಭ್ಯ ಹಿಂದಿರುವ ಹಾಗೂ ಜಾಬ್ ಕಾರ್ಡ್ ಹೊಂದಿರುವ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

WhatsApp Group Join Now
Telegram Group Join Now
Instagram Group Join Now

ಈ ದಿನಾಂಕದಂದು ಬಿಡುಗಡೆಯಾಗಲಿದೆ PM-KISAN 18 ನೇ ಕಂತು!

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅಡಿಕೆ, ಜಾಯಿಕಾಯಿ, ಕೋಕೋ, ಲವಂಗ, ಚಕ್ಕೆ, ತೆಂಗು ಹಾಗೂ ಗೇರು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಅವಕಾಶ ಕಲ್ಪಿಸಲಾಗಿದೆ.

ಇನ್ನೂ 2024-25ನೇ ಸಾಲಿನ ಹನಿ ನೀರಾವರಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಅಡಿಕೆ ಹಾಗೂ ಇನ್ನಿತರೆ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನವನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ.

THIRTHAHALLI
THIRTHAHALLI

ಈ ಯೋಜನೆಗಳ ಲಾಭ ಪಡೆಯಲು ಇಚ್ಚಿಸುವ ರೈತರು ತೀರ್ಥಹಳ್ಳಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಆಗಸ್ಟ್ 31ರೊಳಗೆ ಅರ್ಜಿಗಳನ್ನು ಸಲ್ಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕೋರಿದ್ದಾರೆ.

Gruhalakshmi : ಈ ಜಿಲ್ಲೆಯ ಮಹಿಳೆಯರ ಕೈ ಸೇರಿದೆ ಬಾಕಿ ಇದ್ದ ಗೃಹಲಕ್ಷ್ಮಿ ಕಂತಿನ ಹಣ !

Leave a Comment