HOSANAGARA ; 2024-25ನೇ ಸಾಲಿಗೆ ಹನಿ ನೀರಾವರಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಅರ್ಹ ಫಲಾನುಭವಿಗಳಿಂದ ಅಡಿಕೆ ಹಾಗೂ ಇನ್ನಿತರೆ ತೋಟಗಾರಿಕೆ ಬೆಳೆಗಳಿಗೆ (ಕಾಫಿ, ಟೀ, ರಬ್ಬರ್ ಹೊರತುಪಡಿಸಿ) ಹನಿ ನೀರಾವರಿ ಅಳವಡಿಸಿಕೊಳ್ಳಲು ಇಲಾಖೆಯ ನಿಯಮಾನುಸಾರ ಶೇ.90 ರಷ್ಟು ಸಹಾಯ ಧನವನ್ನು ನೀಡಲು ಅರ್ಜಿ ಆಹ್ವಾನಿಸಿದೆ.
ಈ ಯೋಜನೆಗಳ ಲಾಭ ಪಡೆಯಲು ಇಚ್ಚಿಸುವ ರೈತರು ಹೊಸನಗರ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಅಕ್ಟೋಬರ್ 15 ರೊಳಗೆ ಅರ್ಜಿಗಳನ್ನು ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ ಅಥವಾ ಈ ಕೆಳಕಂಡ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಂಪರ್ಕಿಸಲು ಕೋರಿದೆ.
ಸಂಪರ್ಕ ಸಂಖ್ಯೆಗಳು :
- ಕಸಬಾ, ಕೆರೆಹಳ್ಳಿ ಹೋಬಳಿ : 9481501571
- ಹುಂಚ, ನಗರ ಹೋಬಳಿ : 6006338189
ಅರ್ಜಿ ಆಹ್ವಾನ :
THIRTHAHALLI ; 2024-25ನೇ ಸಾಲಿಗೆ ಹನಿ ನೀರಾವರಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಅರ್ಹ ಫಲಾನುಭವಿಗಳಿಂದ ಅಡಿಕೆ ಹಾಗೂ ಇನ್ನಿತರೆ ತೋಟಗಾರಿಕೆ ಬೆಳೆಗಳಿಗೆ (ಕಾಫಿ, ಟೀ, ರಬ್ಬರ್ ಹೊರತುಪಡಿಸಿ) ಹನಿ ನೀರಾವರಿ ಅಳವಡಿಸಿಕೊಳ್ಳಲು ಇಲಾಖೆಯ ನಿಯಮಾನುಸಾರ ಶೇ.90ರಷ್ಟು ಸಹಾಯ ಧನವನ್ನು ನೀಡಲು ಅರ್ಜಿ ಆಹ್ವಾನಿಸಿದೆ.
ಈ ಯೋಜನೆಗಳ ಲಾಭ ಪಡೆಯಲು ಇಚ್ಚಿಸುವ ರೈತರು ತೀರ್ಥಹಳ್ಳಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಸೆ.30ರೊಳಗೆ ಅರ್ಜಿಗಳನ್ನು ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ ಸಂಪರ್ಕಿಸಬಹುದು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.