SHIVAMOGGA ; ಶಿವಮೊಗ್ಗದ ಕೃಷಿ ಮಹಾವಿದ್ಯಾಲಯ ನವಿಲೇ ವತಿಯಿಂದ ಸೆಪ್ಟೆಂಬರ್ 30 ರಿಂದ 3 ತಿಂಗಳ ಕಾಲ ತೋಟಗಾರಿಕಾ ಬೆಳೆಗಳಲ್ಲಿ ಸಸ್ಯೋತ್ಪಾದನೆ ಮತ್ತು ನರ್ಸರಿ ನಿರ್ವಹಣೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದ್ದು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಬೀಜದಿಂದ, ಕಸಿ ವಿಧಾನ, ಕಾಂಡದ ತುಂಡುಗಳಿಂದ, ಗೂಟಿ ವಿಧಾನದಿಂದ ಸಸ್ಯೋತ್ಪಾದನೆ ಮಾಡುವುದು ಮತ್ತು ಸಸ್ಯಗಾರಗಳ ನಿರ್ವಹಣೆ ಹಾಗೂ ಯಶಸ್ವಿ ಉದ್ಯಮಶೀಲತೆ ಸಾಲ ಸೌಲಭ್ಯಕ್ಕಾಗಿ ಬ್ಯಾಂಕ್‌ಗಳೊಂದಿಗೆ ಜೋಡಣೆ ಇತ್ಯಾದಿ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು ನಂತರ ತರಬೇತಿ ಪೂರೈಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ಕೃಷಿ ಮಹಾವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 73358582371, 8277206549, 9467085677 ಮತ್ತು 9916245892 ಈ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.