ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಗೆ ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

Written by Mahesha Hindlemane

Published on:

ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಜವಾಹರ್ ನವೋದಯ ವಿದ್ಯಾಲಯದ ಕಾರ್ಯಾಲಯಕ್ಕೆ ಜೂನ್ 25ರೊಳಗಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಲು ಪ್ರಾಂಶುಪಾಲರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 2025-26ನೇ ಸಾಲಿನಲ್ಲಿ 10ನೇ ತರಗತಿ ಪರೀಕ್ಷೆಯನ್ನು ಉತ್ತೀರ್ಣರಾಗಿರಬೇಕು. ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ 60% ಅಂಕಗಳನ್ನು ಹೊಂದಿರಬೇಕು. ಜೊತೆಗೆ, ವಿದ್ಯಾರ್ಥಿಗಳು 2009ರ ಜೂನ್ 1 ರಿಂದ 2011ರ ಜುಲೈ 31ರ ನಡುವೆ ಹುಟ್ಟಿರಬೇಕು.

ಹೆಚ್ಚಿನ ವಿವರಗಳಿಗಾಗಿ ವಿದ್ಯಾಲಯದ ಅಧಿಕೃತ ಇ-ಮೇಲ್ ವಿಳಾಸ [email protected] ಅಥವಾ ಅಧಿಕೃತ ವೆಬ್‌ಸೈಟ್ https://navodaya.gov.in/nvs/nvs-school/SHIMOGA/en/home/index.html ಗೆ ಭೇಟಿ ನೀಡಬಹುದು.

Leave a Comment