ಶಿವಮೊಗ್ಗ : ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ನಾಲೂರು (ಕೊಳಗಿ), ಶೆಡ್ಗಾರು, ಹಾರೊಗುಳಿಗೆ, ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್, ಹೀರೆನೆಲ್ಲೂರ, ಹೊಸನಗರ ತಾಲ್ಲೂಕಿನ ಯಡೂರು, ತ್ರಿಣಿವೆ, ರಿಪ್ಪನ್‌ಪೇಟೆಯಲ್ಲಿ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶವಿದ್ದು, ಆಸಕ್ತರು https://www.karnatakaone.gov.in/Public/GramOneFranchiseeTrems ವೆಬ್‌ಸೈಟ್ ಮೂಲಕ ಜು.15 ರೊಳಗಾಗಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.