ಹೊಸನಗರ ; 2025-26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯನ್ನು ಬೆಳೆಯಲು ಇಚ್ಛಿಸುವ ರೈತರಿಗೆ ಉಚಿತವಾಗಿ ತಾಳೆ ಸಸಿಗಳನ್ನು ವಿತರಿಸಿ ಪ್ರಸ್ತುತ ವರ್ಷ ಹಾಗೂ ಮುಂದಿನ 3 ವರ್ಷಗಳವರೆಗೆ ನೆಟ್ಟ ಸಸಿಗಳ ನಿರ್ವಹಣೆಗಾಗಿ ಸಹಾಯಧನವನ್ನು ನೀಡಲು ಅವಕಾಶವಿದೆ ಎಂದು ಹೊಸನಗರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಟಿ.ಸಿ. ಪುಟ್ಟನಾಯ್ಕ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹೊಸದಾಗಿ ತಾಳೆ ಬೆಳೆಯನ್ನು ಅಭಿವೃದ್ಧಿಪಡಿಸಲು ಇಚ್ಛಿಸುವ ತಾಲ್ಲೂಕಿನ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ರೈತರು ಹೊಸನಗರ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಛೇರಿಯಲ್ಲಿ ಮೇ 28ರ ಒಳಗಾಗಿ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಕರ ಕಛೇರಿ, (ಜಿ.ಪಂ), ಹೊಸನಗರ (ಮೊ.9591695327) ಇಲ್ಲಿ ಸಂಪರ್ಕಿಸಲು ಕೋರಿದೆ.