ಹೊಸನಗರ : ತಾಲೂಕಿನಲ್ಲಿ ಖಾಲಿ ಇರುವ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 144 ಸಹಾಯಕಿಯರ ಹುದ್ದೆ ಭರ್ತಿಗೆ ಆಯಾ ಕಂದಾಯ ಗ್ರಾಮ ಹಾಗು ನಗರ ಪ್ರದೇಶದಲ್ಲಿ ಕಂದಾಯ ವಾರ್ಡ್‌ನಲ್ಲಿ ವಾಸ್ತವ್ಯ ಹೊಂದಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಇದೇ 2025ರ ನವೆಂಬರ್ 14ರಿಂದ ಅರ್ಹರು ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಕೆಗೆ ಡಿಸೆಂಬರ್ 15 ಕಡೆಯ ದಿನವಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಹೊಸನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯನ್ನು (ದೂರವಾಣಿ : 08185-295485) ಸಂಪರ್ಕಿಸಿಸಲು ಸಿಡಿಪಿಒ ಗಾಯತ್ರಿ ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

