Ganga kalyana scheme : ಕರ್ನಾಟಕ ಸರ್ಕಾರ ವಿವಿಧ ಅಭಿವೃದ್ಧಿ ನಿಗಮಗಳ ಮೂಲಕ ರಾಜ್ಯದ ಜನರಿಗೆ ಏಕಕಾಲದಲ್ಲಿ ಹಲವಾರು ಪ್ರಯೋಜನಗಳನ್ನು ಒದಗಿಸುತ್ತಿದೆ. ಪ್ರತಿ ವರ್ಷದಂತೆ, ಈ ವರ್ಷವೂ ಉಚಿತ ಬೋರ್‌ವೆಲ್‌ಗಾಗಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ.
ಗಂಗಾ ಕಲ್ಯಾಣ ಯೋಜನೆ
ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮುಂತಾದ ವಿಭಿನ್ನ ನಿಗಮಗಳ ಮೂಲಕ ವಿವಿಧ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಇದೀಗ ರೈತರಿಗೆ ಉಚಿತ ಬೋರ್ ವೆಲ್ ಕೊರೆದು ಕೊಡುವುದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಈ ಸೌಲಭ್ಯವನ್ನು ಒದಗಿಸಲಾಗುತ್ತದೆ. ಅರ್ಹ ರೈತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೂಲಕ ಈ ಲಾಭವನ್ನು ಪಡೆಯಬಹುದು.
ವಿವಿಧ ನಿಗಮಗಳಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ. ಸಣ್ಣ ಮತ್ತು ಅತಿ ಸಣ್ಣ ಜಮೀನು ಹಿಡಿದವರಾದವರು ಇದರ ಬಗ್ಗೆ ಅರ್ಜಿ ಸಲ್ಲಿಸಿ ಇದರ ಪ್ರಯೋಜನವನ್ನು ಪಡೆಯಬಹುದು. ಬೋರ್ ವೆಲ್ ಕೊರೆಸುವುದರಿಂದ ಹಿಡಿದು, ಎಲ್ಲಾ ರೀತಿಯ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವ ಮೂಲಕ ನಿಮ್ಮ ಜಮೀನಿಗೆ ನೀರಿನ ಕೊರತೆಯನ್ನು ಪೂರೈಸುವ ಮೂಲಕ ಈ ಯೋಜನೆ ಸಹಾಯ ಮಾಡುತ್ತದೆ.
ಗಂಗಾ ಕಲ್ಯಾಣ ಯೋಜನೆ ಸಹಾಯಧನ ಎಷ್ಟು?
ಅರ್ಹ ರೈತರಿಗೆ ₹1.5 ಲಕ್ಷದಿಂದ ₹3.50 ಲಕ್ಷದವರೆಗೆ ಸಹಾಯಧನ ನೀಡಲಾಗುತ್ತದೆ. ಇದಲ್ಲದೆ, ಜಾತಿ ಆಧಾರದಲ್ಲಿ ಸಬ್ಸಿಡಿಯು ಲಭ್ಯವಿದೆ. ಹಾಗಾದರೆ, ಅರ್ಜಿ ಸಲ್ಲಿಸಲು ಯಾರು ಅರ್ಹರಾಗಿದ್ದಾರೆ ಎಂಬುದರ ಬಗ್ಗೆ ತಿಳಿಯೋಣ.
ಅರ್ಜಿದಾರರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರಾಗಿರಬೇಕು.
ಅರ್ಜಿದಾರರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರು ವಾರ್ಷಿಕ ಆದಾಯ ₹1.5 ಲಕ್ಷಕ್ಕಿಂತ ಹೆಚ್ಚು ಇರುವ ಹಾಗಿಲ್ಲನಗರ ಪ್ರದೇಶದವರಿಗೆ ವಾರ್ಷಿಕ ಆದಾಯ ₹2 ಲಕ್ಷಕ್ಕಿಂತ ಹೆಚ್ಚು ಇರುವಾಗಿಲ್ಲ.ಕನಿಷ್ಠ 21 ವರ್ಷ ವಯಸ್ಸಾಗಿರಬೇಕು.ಜಮೀನು ಹಿಡುವಳಿಯ ಪ್ರಮಾಣ ಹೊಂದಿರಬೇಕು.1.20 ಎಕರೆಯಿಂದ 5 ಎಕರೆ ಒಳಗೆ ಜಮೀನು ಹೊಂದಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳನ್ನು ಹೊಂದಿದ್ದು, ಸೇವಾಸಿಂದು ಮೂಲಕ ಅರ್ಜಿ ಸಲ್ಲಿಸಲು ಅಗತ್ಯವಿದೆ. ಇದಕ್ಕಾಗಿ ನೀವು ಕಂಪ್ಯೂಟರ್ ಸೆಂಟರ್‌ಗಳಿಗೆ ಭೇಟಿ ನೀಡಬಹುದು. ನೀವು ಯಾವುದೇ ಸಮಸ್ಯೆ ಎದುರಿಸುತ್ತಿದ್ದರೆ, ಕಲ್ಯಾಣ ಮಿತ್ರ 24 ಗಂಟೆಗಳ ಸಹಾಯವಾಣಿ (9482300400) ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.