ಹೊಸನಗರ ; ಸಮಾಜ ಕಲ್ಯಾಣ ಇಲಾಖಾವತಿಯಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಠಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮಂಜೂರು ಮಾಡಲಾಗಿದೆ.
ಈ ಸಂಬಂಧ 2025-26ನೇ ಸಾಲಿನಿಂದ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಭಾರತ ಸರ್ಕಾರದ
Ministey of electronics and information Technology ರವರು ಅಭಿವೃದ್ಧಿಪಡಿಸಿರುವ National Scholarship portel ನಲ್ಲಿ One time Registeration ಸಂಖ್ಯೆಯನ್ನು Create ಮಾಡಿಕೊಂಡು ತದನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.
ಆದ್ದರಿಂದ ಹೊಸನಗರ ತಾಲ್ಲೂಕಿನ ಮೆಟ್ರಿಕ್ ಪೂರ್ವ (9 ಮತ್ತು 10 ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಭಾರತ ಸರ್ಕಾರದ Ministey of electronics and information Technology ರವರು ಅಭಿವೃದ್ಧಿಪಡಿಸಿರುವ National Scholarship portel (web site link:-https//scholarships.gov.in) ಅರ್ಜಿ ಸಲ್ಲಿಬೇಕೆಂದು ಹೊಸನಗರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ ತಿಳಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.