ಹೊಸನಗರ

ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ ; ಜುಲೈ 31 ಕೊನೆಯ ದಿನ

ಹೊಸನಗರ : 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೊಸನಗರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಫಸಲು ಬಿಡುವಂತಹ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವಂತಹ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದೆ. ಆಸಕ್ತ ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಅಥವಾ ಬ್ಯಾಂಕ್‌ಗಳಲ್ಲಿ ದಿನಾಂಕ 31-07-2026 ರ ಒಳಗೆ ವಿಮೆ ಕಂತನ್ನು ಪಾವತಿಸಬೇಕಾಗಿ ವಿನಂತಿಸಲಾಗಿದೆ.

ವಿಮೆಗೆ ಒಳಪಡುವ ಘಟಕ ಪ್ರದೇಶ :

ಆಡಿಕೆ : ಶಿವಮೊಗ್ಗ ಜಿಲ್ಲೆಯ ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿ
ಕಾಳುಮೆಣಸು : ಶಿವಮೊಗ್ಗ, ಜಿಲ್ಲೆಯ ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿ
ಶುಂಠಿ : ಶಿವಮೊಗ್ಗ ಜಿಲ್ಲೆಯ ತಾಲ್ಲೂಕುಗಳ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿ
ಮಾವು : ಶಿವಮೊಗ್ಗ, ಸೊರಬ ಮತ್ತು ಶಿಕಾರಿಪುರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿ

ರೈತರು ಪಾವತಿಸಬೇಕಾದ ವಿಮಾ ಕಂತಿನ ವಿವರ :

ಅಡಿಕೆ : ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 1,28,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 2560 ಅಥವಾ ಪ್ರತಿ ಗುಂಟೆಗೆ ರೂ. 64 ಪಾವತಿಸಬೇಕು.

ಮಾವು: ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 80,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 3200 ಅಥವಾ ಪ್ರತಿ ಗುಂಟೆಗೆ ರೂ. 80 ಪಾವತಿಸಬೇಕು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಾಳುಮೆಣಸು: ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 47,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 1692 ಅಥವಾ ಪ್ರತಿ ಗುಂಟೆಗೆ ರೂ. 42.30 ಪಾವತಿಸಬೇಕು.

ಶುಂಠಿ: ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 1,30,000 ಆಗಿದ್ದು, ರೈತರು ಪ್ರತಿ ಎಕರೆಗೆ ರೂ. 2600 ಅಥವಾ ಪ್ರತಿ ಗುಂಟೆಗೆ ರೂ. 65 ಪಾವತಿಸಬೇಕು.

ಮೇಲ್ಕಂಡ ಬೆಳೆಗಳನ್ನು ಬೆಳೆದಿರುವ ತಾಲೂಕಿನ ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು. ವಿಮೆ ಪಾವತಿಸಲು ಜುಲೈ 31 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಹೊಸನಗರ ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಷರತ್ತುಗಳು :

  • ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಿಮಾ ನಷ್ಟ ಪರಿಹಾರವನ್ನು ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರವು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸ್ಥಾಪಿಸಿರುವ ಮಳೆ ಮಾಪನ ಹಾಗೂ ಹವಾಮಾನ ಕೇಂದ್ರಗಳಲ್ಲಿ ದಾಖಲಾದ ಮಾಹಿತಿಯನ್ನಾಧಾರಿಸಿ ಅಂದಾಜಿಸಲಾಗುವುದು.
  • ಪರಿಹಾರದ ಮೊತ್ತವನ್ನು ನೀಡಲು ಅಧಿಸೂಚಿಸಲಾದ Term sheet, Pay out structure, Duration, Index (ಉದಾ: ಕಡಿಮೆ ಮಳೆ, ಅಧಿಕ ಮಳೆ-ಅಧಿಕ ಆದ್ರತೆ, ಅಧಿಕ ಮಳೆ. ಸತತ ನಾಲ್ಕು ದಿನಗಳಿಂದ ಅಧಿಕ ಮಳೆಯಿಂದಾಗಿ ಬೆಳೆಗಳಿಗೆ ಆಗುವ ಪ್ರತಿಕೂಲ ಪರಿಣಾಮಗಳು) ಗಳನ್ನಾಧಾರಿಸಿ ಅಂದಾಜಿಸಲಾಗುವುದು.
  • ಅಧಿಸೂಚಿತ ಘಟಕದಲಿ (ಗ್ರಾಮ ಪಂಚಾಯತ್) ವಿಮೆಗೆ ಒಳಪಟ್ಟ ಎಲ್ಲಾ ರೈತರಿಗೂ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.
  • ಅಧಿಸೂಚಿಸಲಾದ ಬೆಳೆಗಳಿಗೆ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲು, ಮಳೆ, ಭೂಕುಸಿತ ಮತ್ತು ಬೆಳೆ ಮುಳುಗಡೆ ಸಂದರ್ಭಗಳಲಿ ಬೆಳೆ ನಷ್ಟವುಂಟಾದರೆ ವೈಯಕ್ತಿಕವಾಗಿ ನಮ್ಮವನ್ನು ನಿರ್ಧರಿಸಲು ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆ ಕಚೇರಿಗಳಿಗೆ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಗಳೊಳಗಾಗಿ ತಿಳಿಸತಕ್ಕದ್ದು.
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!