ಶಿವಮೊಗ್ಗ

ಅಕ್ರಮ ಗೋ ಸಾಗಾಟ ತಡೆಯಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿ: ಆರಗ ಜ್ಞಾನೇಂದ್ರ

ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣಗಳು ಮರುಕಳಿಸುತ್ತಿರುವ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೋ ಸಾಗಾಟಗಾರರ ವಿರುದ್ಧ ಬಲವಾದ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಅಕ್ರಮ ಗೋ ಸಾಗಾಟ ತಡೆಯಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿ: ಆರಗ ಜ್ಞಾನೇಂದ್ರ – araga jnanendra

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣಗಳು ಮರುಕಳಿಸುತ್ತಿರುವ ಬಗ್ಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಕೃತ್ಯಗಳನ್ನು ತಡೆಯಲು ಪೊಲೀಸ್ ಇಲಾಖೆ ಹೆಚ್ಚು ಬದ್ಧತೆಯಿಂದ ಮತ್ತು ಕಠಿಣವಾಗಿ ಕೆಲಸ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ತೀರ್ಥಹಳ್ಳಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ಕ್ಷೇತ್ರದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುವ ಘಟನೆಗಳು ನಡೆಯುತ್ತಿದ್ದು, ಇದಕ್ಕೆ ಪ್ರೋತ್ಸಾಹ ನೀಡುವವರ ವಿರುದ್ಧವೂ ಕ್ರಮ ಆಗಬೇಕು ಎಂದು ಹೇಳಿದರು.

ಅಕ್ರಮ ಗೋ ಸಾಗಾಟದ ವಿಚಾರದಲ್ಲಿ ಕೆಲ ಸಂದರ್ಭಗಳಲ್ಲಿ ಪೊಲೀಸರ ನಡೆ ಪ್ರಶ್ನಾರ್ಹವಾಗಿದೆ ಎಂದು ಆರೋಪಿಸಿದ ಅವರು, ಗೋವುಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸುವ ಸಾರ್ವಜನಿಕರು ಹಾಗೂ ಗೋ ರಕ್ಷಕರ ಮೇಲೆಯೇ ಪ್ರಕರಣ ದಾಖಲಿಸಿರುವ ಘಟನೆಗಳೂ ನಡೆದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚೆಗೆ ಸಿಕ್ಕಿಬಿದ್ದ ಗೋ ಸಾಗಾಟಗಾರ ಹಲವು ವರ್ಷಗಳಿಂದ ಇದೇ ರೀತಿಯ ಕೃತ್ಯದಲ್ಲಿ ತೊಡಗಿದ್ದಾನೆ ಎಂದು ಆರೋಪಿಸಿದ ಆರಗ, ಇಂತಹ ಪ್ರಕರಣಗಳಲ್ಲಿ ಸಾಮಾನ್ಯ ಕಾಯ್ದೆಗಳಡಿ ಕೇಸ್ ದಾಖಲಿಸುವುದರಿಂದ ಆರೋಪಿಗಳು ಬೇಗನೇ ಜಾಮೀನು ಪಡೆದು ಮತ್ತೆ ಅದೇ ಕೃತ್ಯ ಮುಂದುವರಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ತಾವು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಗೋವಧೆ ನಿಷೇಧ ಹಾಗೂ ಗೋ ಸಂರಕ್ಷಣೆಗೆ ಸಂಬಂಧಿಸಿದ ಕಾಯ್ದೆಯನ್ನು ಮಂಡಿಸಿ ಅಂಗೀಕರಿಸಲಾಗಿತ್ತು. ಆ ಕಾಯ್ದೆಯಡಿ ಪ್ರಕರಣ ದಾಖಲಿಸಿದರೆ ಆರೋಪಿಗಳಿಗೆ ಸುಲಭವಾಗಿ ಜಾಮೀನು ಸಿಗುವುದಿಲ್ಲ. ಆದ್ದರಿಂದ ಪೊಲೀಸರು ಆ ಬಲವಾದ ಕಾನೂನನ್ನು ಪರಿಣಾಮಕಾರಿಯಾಗಿ ಬಳಸಬೇಕು ಎಂದು ಅವರು ಒತ್ತಾಯಿಸಿದರು.

ಅಕ್ರಮ ಗೋ ಸಾಗಾಟಕ್ಕೆ ಸಂಪೂರ್ಣ ಕಡಿವಾಣ ಹಾಕುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ವಲಯ ಐಜಿಪಿ ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿರುವುದಾಗಿ ಆರಗ ಜ್ಞಾನೇಂದ್ರ ತಿಳಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650