THIRTHAHALLI ; ತಾಲ್ಲೂಕಿನ ಅರಳಸುರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋದೂರು ಗ್ರಾಮದ ನೀಲಮ್ಮ ಶಂಕರಪ್ಪ (70) ಅಲ್ಪಕಾಲದ ಅನಾರೋಗ್ಯದಿಂದ ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.
ಮೃತರು ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಸಹೋದರ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಕೋದೂರು ಗ್ರಾಮದಲ್ಲಿ ಇಂದು ಸಂಜೆ ನಡೆಯಿತು.
ರಾಮಣ್ಣ ಗೌಡ ಮತ್ತು ಚಿನ್ನಮ್ಮ ದಂಪತಿಗಳ ಐವರು ಪುತ್ರರು ಮತ್ತು ಐವರು ಪುತ್ರಿಯರ ಪೈಕಿ ಶಾಸಕ ಆರಗ ಜ್ಞಾನೇಂದ್ರ ಮೊದಲನೇ ಪುತ್ರರಾಗಿದ್ದು ನೀಲಮ್ಮ ಎರಡನೇ ಪುತ್ರಿಯಾಗಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.