ಶಿವಮೊಗ್ಗ

ಅಡಿಕೆ ವ್ಯಾಪಾರಿಯ ಕಾರು ಅಡ್ಡಗಟ್ಟಿ ₹58 ಲಕ್ಷ ದರೋಡೆ: ಭದ್ರಾವತಿಯಲ್ಲಿ ಐವರು ಸಿಕ್ಕಿಬಿದ್ದಿದ್ದು ಹೇಗೆ?

ಅಡಿಕೆ ವ್ಯಾಪಾರಿಯ ಕಾರು ಅಡ್ಡಗಟ್ಟಿ ₹58 ಲಕ್ಷ ದರೋಡೆ: ಭದ್ರಾವತಿಯಲ್ಲಿ ಐವರು ಸಿಕ್ಕಿಬಿದ್ದಿದ್ದು ಹೇಗೆ? – darode

ಶಿವಮೊಗ್ಗ: ಬೆಂಗಳೂರಿನಿಂದ ಹಿಂದಿರುಗುತ್ತಿದ್ದ ಅಡಿಕೆ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ₹58 ಲಕ್ಷ ನಗದು ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡೂರು ಪೊಲೀಸರು ಐವರು ಆರೋಪಿಗಳನ್ನು ಭದ್ರಾವತಿಯಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ₹30 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದ್ದು, ತಲೆಮರೆಸಿಕೊಂಡಿರುವ ಮತ್ತ ಮೂವರು ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ.

WhatsApp Group Join Now
Telegram Group Join Now
Instagram Group Join Now

ನವೆಂಬರ್ 7ರ ಮಧ್ಯರಾತ್ರಿ ಬೀರೂರು ಮೂಲದ ಅಡಿಕೆ ವ್ಯಾಪಾರಿ ತೌಫಿಕ್ ಅವರು ಫಾರ್ಚುನರ್ ಕಾರಿನಲ್ಲಿ ಬೆಂಗಳೂರಿನಿಂದ ವಾಪಸಾಗುತ್ತಿದ್ದ ವೇಳೆ ಈ ಘಟನೆ ನಡೆದಿತ್ತು. ಕಡೂರು ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ₹58 ಲಕ್ಷ ನಗದು ದೋಚಿ ಪರಾರಿಯಾಗಿದ್ದರು.

ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದರು.

ವ್ಯಾಪಾರಿಯ ಬಳಿಯೇ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅನುಮಾನ

ತನಿಖೆ ವೇಳೆ ವ್ಯಾಪಾರಿ ತೌಫಿಕ್ ಅವರ ಬಳಿಯೇ ಕೆಲಸ ಮಾಡುತ್ತಿದ್ದ ಇರ್ಫಾನ್ ಎಂಬಾತನ ಪಾತ್ರದ ಬಗ್ಗೆ ಪೊಲೀಸರಿಗೆ ಅನುಮಾನ ಮೂಡಿತ್ತು.

ವ್ಯಾಪಾರಿಯ ಹಣಕಾಸಿನ ವ್ಯವಹಾರಗಳು, ಅವರು ನಗದು ಹಣದೊಂದಿಗೆ ಪ್ರಯಾಣಿಸುವ ಸಮಯ ಹಾಗೂ ಸಂಚರಿಸುವ ಮಾರ್ಗದ ಮಾಹಿತಿಯನ್ನು ಇರ್ಫಾನ್ ದರೋಡೆಕೋರರಿಗೆ ನೀಡಿದ್ದ ಎನ್ನಲಾಗಿದೆ.

ಈ ಮಾಹಿತಿಯ ಆಧಾರದಲ್ಲಿ ದರೋಡೆಗೆ ಸಂಚು ರೂಪಿಸಲಾಗಿತ್ತು ಎಂಬ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು.

ಭದ್ರಾವತಿಯಲ್ಲಿ ಆರೋಪಿಗಳ ಬಂಧನ

ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳು ಭದ್ರಾವತಿಯಲ್ಲಿ ಅಡಗಿಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.

ಈ ಸುಳಿವಿನ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಕಡೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ₹30 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.

ದರೋಡೆಯಾದ ಒಟ್ಟು ₹58 ಲಕ್ಷದಲ್ಲಿ ಇನ್ನೂ ₹28 ಲಕ್ಷ ನಗದು ಪತ್ತೆಯಾಗಬೇಕಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.

ಅಡಿಕೆ ವ್ಯಾಪಾರಿಯ ಪ್ರಯಾಣದ ಮಾಹಿತಿ ದರೋಡೆಕೋರರಿಗೆ ಹೇಗೆ ತಲುಪಿತು ಹಾಗೂ ಪ್ರಕರಣದಲ್ಲಿ ಇತರರ ಪಾತ್ರವಿದೆಯೇ ಎಂಬ ಬಗ್ಗೆ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್