ಭದ್ರಾವತಿ ; ಕ್ರಿಕೆಟ್ ಆಡುವ ವಿಚಾರವಾಗಿ ಗಲಾಟೆ ಆರಂಭವಾಗಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ.
ಮೃತನನ್ನು ಕೇಶವಪುರ ಬಡಾವಣೆ ನಿವಾಸಿ
ಅರುಣ್ (23) ಎಂದು ಗುರುತಿಸಲಾಗಿದೆ. ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆಯಲ್ಲಿ ಸಂಜಯ್ (20) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ.

ನಿನ್ನೆ ಸಂಜೆ ಕ್ರಿಕೆಟ್ ವಿಚಾರವಾಗಿ ಅರುಣ್ ಹಾಗೂ ಇತರರ ನಡುವೆ ಗಲಾಟೆ ನಡೆದಿದೆ. ರಾತ್ರಿ ಕೇಶವಪುರ ಬಡಾವಣೆಯ ನೀರಿನ ಟ್ಯಾಂಕ್ ಕೆಳಗೆ ಕುಳಿತು ಮದ್ಯ ಸೇವಿಸುತ್ತಿರುವಾಗ ಮತ್ತೆ ಯುವಕರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿದೆ. ಈ ವೇಳೆ, ಅರುಣ್ ಎಂಬಾತನಿಗೆ ಲಾಂಗ್ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ
ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.