ಕ್ರಿಕೆಟ್ ಆಡುವ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ !

ಭದ್ರಾವತಿ ; ಕ್ರಿಕೆಟ್ ಆಡುವ ವಿಚಾರವಾಗಿ ಗಲಾಟೆ ಆರಂಭವಾಗಿ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಬಡಾವಣೆಯಲ್ಲಿ ನಡೆದಿದೆ. ಮೃತನನ್ನು ಕೇಶವಪುರ ಬಡಾವಣೆ ನಿವಾಸಿಅರುಣ್ (23) ಎಂದು ಗುರುತಿಸಲಾಗಿದೆ. ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆಯಲ್ಲಿ ಸಂಜಯ್ (20) ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ನಿನ್ನೆ ಸಂಜೆ ಕ್ರಿಕೆಟ್ ವಿಚಾರವಾಗಿ ಅರುಣ್ ಹಾಗೂ ಇತರರ ನಡುವೆ ಗಲಾಟೆ ನಡೆದಿದೆ. ರಾತ್ರಿ ಕೇಶವಪುರ ಬಡಾವಣೆಯ ನೀರಿನ ಟ್ಯಾಂಕ್ ಕೆಳಗೆ ಕುಳಿತು ಮದ್ಯ ಸೇವಿಸುತ್ತಿರುವಾಗ … Continue reading ಕ್ರಿಕೆಟ್ ಆಡುವ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ !