ಅಪರಾಧ ಸುದ್ದಿ

ಮ್ಯಾಟ್ರಿಮೋನಿಯಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದವ ಅರೆಸ್ಟ್ !

ಶಿವಮೊಗ್ಗ : ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು, ಮದುವೆಯಾಗುವುದಾಗಿ ನಂಬಿಸಿ, ಕೊನೆಗೆ ಹಣ, ಚಿನ್ನಾಭರಣ ಪಡೆದು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿ ಗ್ರಾಮದ ಭೀಮರಾಜ್ ಅಲಿಯಾಸ್ ಜೈಭೀಮ್ (40) ಬಂಧಿತ ಆರೋಪಿ. ಈತ ಪದಕೋಠಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಮದುವೆಯಾಗುವುದಾಗಿ ನಂಬಿಸಿ ಹಣ, ಚಿನ್ನಾಭರಣ ಪಡೆಯುತ್ತಿದ್ದ.

ಭದ್ರಾವತಿಯ 40 ವರ್ಷದ ಮಹಿಳೆಯೊಬ್ಬರಿಗೆ ಇದೇ ರೀತಿ ವಂಚನೆ ಮಾಡಿದ್ದ. ಆ ಮಹಿಳೆಯಿಂದ ಫೋನ್ ಪೇ ಮೂಲಕ 5.43 ಲಕ್ಷ ರೂ. ಹಣ ವರ್ಗಾಯಿಸಿಕೊಂಡಿದ್ದ. 2 ಲಕ್ಷ ರೂ. ನಗದು ಹಣ, ಸುಮಾರು 2.25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿದ್ದ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಭೀಮರಾಜ್‌ಗೆ ಈಗಾಗಲೇ ಮದುವೆಯಾಗಿದೆ. ಹಾಗಿದ್ದು ತಾನು ವಿವಾಹಿತ ಅನ್ನುವುದನ್ನು ಮರೆಮಾಚಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳಲ್ಲಿ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ. ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ಎಂದು ಆರೋಪಿಸಲಾಗಿದೆ.

ಇದೇ ರೀತಿ ರಾಜ್ಯಾದ್ಯಂತ ಈತ ಮಹಿಳೆಯರನ್ನು ವಂಚಿಸಿದ್ದಾನೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಭೀಮರಾಜ್ ವಿರುದ್ಧ 12 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಭದ್ರಾವತಿಯ ಹಳೇ ನಗರ ಠಾಣೆ ಮತ್ತು ಹೊಸನಗರ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಈತನ ಬಂಧಿತನಾಗಿದ್ದು ಕೊಪ್ಪಳದ ಕಾರಾಗೃಹದಲ್ಲಿದ್ದಾನೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!