HOSANAGARA ; 40 ಕೆ.ಜಿ. ಮಾಂಸ ಸಹಿತ ಕಾಡುಹಂದಿ ಬೇಟೆಗಾರರನ್ನು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆ ಹುಣಸವಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಡುಹಂದಿಯನ್ನು ಬೇಟೆಯಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಮೂವರ ವಿರುದ್ಧ ಪ್ರಕರಣ ದಾಖಲಿಸಿ ಓರ್ವನನ್ನು ಬಂಧಿಸಿದ್ದಾರೆ.

ಕೆ ಹುಣಸವಳ್ಳಿ ಗ್ರಾಮದ ಡಾಕಪ್ಪ ಬಿನ್ ಮಂಜಪ್ಪ, ಕಾರ್ತಿಕ್ ಬಿನ್ ಡಾಕಪ್ಪ ಹಾಗೂ ಗಣೇಶ ಬಿನ್ ಈಶ್ವರನಾಯ್ಕ ಎಂಬುವವರು ಕಾಡು ಹಂದಿಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಎಸಿಎಫ್ ಮೋಹನ್ ಕುಮಾರ್ ನೇತೃತ್ವದ ಅಲಗೇರಿಮಂಡ್ರಿ ವ್ಯಾಪ್ತಿಯ ಡಿ.ಆರ್.ಎಫ್.ಓ ನವೀನ್ ಕುಮಾರ್ ತಂಡ ಅಂದಾಜು 40 ಕೆ.ಜಿ ಮಾಂಸ ಸಮೇತ ಓರ್ವ ಆರೋಪಿಯನ್ನು ಬಂಧಿಸಿದ್ದು ಇನ್ನಿಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಎಸಿಎಫ್ ಮೋಹನ್ ಕುಮಾರ್, ಆರ್‌ಎಫ್ಒ ಅನಿಲ್ ಕುಮಾರ್, ಡಿ.ಆರ್.ಎಫ್.ಓ ನವೀನ್ ಕುಮಾರ್, ಅರಣ್ಯ ರಕ್ಷಕರಾದ ರಾಜು ಎನ್, ಪುಟ್ಟಸ್ವಾಮಿ, ಭರತ್ ಹಾಗೂ ಇನ್ನಿತರ ಸಿಬ್ಬಂದಿಗಳಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.