ಹೊಸನಗರ

ರಿಪ್ಪನ್‌ಪೇಟೆ: ಆರ್.ಐ. ನಿವೇಶನಕ್ಕೆ ಕಾಯ್ದಿರಿಸಿದ ಜಾಗಕ್ಕೆ ಪ್ರಭಾವಿ ವ್ಯಕ್ತಿಯಿಂದ ಬೇಲಿ – ಸಾರ್ವಜನಿಕರ ಆಕ್ರೋಶ

ರಿಪ್ಪನ್‌ಪೇಟೆ : ನಾಡಕಛೇರಿ ಹಿಂಭಾಗದ ಬರುವೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಇರುವ, ರೆವಿನ್ಯೂ ಇನ್ಸ್ಪೆಕ್ಟರ್ ವಸತಿ ನಿವೇಶನಕ್ಕಾಗಿ ಮೀಸಲಿಟ್ಟ ಸರ್ಕಾರಿ ಜಾಗವನ್ನು ಪ್ರಭಾವಿ ವ್ಯಕ್ತಿಯೊಬ್ಬರು ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

InShot 20260917 174108160

ರಿಪ್ಪನ್‌ಪೇಟೆ : ನಾಡಕಛೇರಿ ಹಿಂಭಾಗದ ಬರುವೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಇರುವ, ರೆವಿನ್ಯೂ ಇನ್ಸ್ಪೆಕ್ಟರ್ ವಸತಿ ನಿವೇಶನಕ್ಕಾಗಿ ಮೀಸಲಿಟ್ಟ ಸರ್ಕಾರಿ ಜಾಗವನ್ನು ಪ್ರಭಾವಿ ವ್ಯಕ್ತಿಯೊಬ್ಬರು ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಅಕ್ರಮ ಬೇಲಿ ನಿರ್ಮಾಣ:

ಗೌರಿ-ಗಣೇಶ ಹಬ್ಬದ ಸಾಲು ಸಾಲು ರಜೆಗಳ ಲಾಭ ಪಡೆದು, ನ್ಯಾಯಾಲಯದ ಹಸ್ತಕ್ಷೇಪ ಹಾಗೂ ಅಧಿಕಾರಿಗಳ ಪರಿಶೀಲನೆಯಿಂದ ತಪ್ಪಿಸಿಕೊಳ್ಳಲು ಖಾಸಗಿ ವ್ಯಕ್ತಿಯೋರ್ವ ಕಲ್ಲು ಕಂಬ ಮತ್ತು ತಂತಿ ಬೇಲಿ ಹಾಕಲಾಗಿದೆ.

ಅಧಿಕಾರಿಗಳ ಮೌನಕ್ಕೆ ಶಂಕೆ:

ಸಾಮಾನ್ಯ ಬಡಜನರು ಸಣ್ಣ ಮಟ್ಟದ ಅತಿಕ್ರಮಣ ಮಾಡಿದ ತಕ್ಷಣವೇ ತೆರವುಗೊಳಿಸುವ ನಾಡಕಛೇರಿ ಸಿಬ್ಬಂದಿಗಳು, ಪ್ರಭಾವಿ ವ್ಯಕ್ತಿಯ ಈ ಅಕ್ರಮದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರಲ್ಲಿ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಮರುಕಳಿಸಿದ ಅತಿಕ್ರಮಣ ಯತ್ನ:

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಳೆದ ಏಳೆಂಟು ವರ್ಷಗಳ ಹಿಂದೆಯೂ ಇದೇ ವ್ಯಕ್ತಿ ಈ ಜಾಗವನ್ನು ಆಕ್ರಮಿಸಲು ಯತ್ನಿಸಿದ್ದರು. ಆದರೆ ಆಗಿನ ರೆವಿನ್ಯೂ ಇನ್ಸ್ಪೆಕ್ಟರ್ ಮಂಜಣ್ಣ ಮತ್ತು ಸಿಬ್ಬಂದಿಗಳು ಬೇಲಿ ತೆರವುಗೊಳಿಸಿ, ‘ಆರ್‌ಐ ನಿವಾಸಕ್ಕೆ ಕಾಯ್ದಿರಿಸಿದ ಜಾಗ’ ಎಂದು ಫಲಕ ಹಾಕಿದ್ದರು.

ಮಾಹಿತಿ ಇದ್ದರೂ ತಡೆಯದ ನಿರ್ಲಕ್ಷ್ಯ:

ಅಂದು ಕ್ರಮ ಕೈಗೊಂಡಿದ್ದ ಮಂಜಣ್ಣ ಅವರೀಗ ತಾಲೂಕು ಕಛೇರಿಯಲ್ಲಿ ಶಿರಸ್ತೇದಾರರಾಗಿದ್ದು, ಅವರಿಗೆ ಸಂಪೂರ್ಣ ವಿಷಯ ತಿಳಿದಿದ್ದರೂ ತೆರವುಗೊಳಿಸಲು ಮುಂದಾಗದಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಸರ್ಕಾರಿ ಸ್ವತ್ತನ್ನು ರಕ್ಷಿಸಬೇಕಾದ ಕಂದಾಯ ಇಲಾಖೆಯ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು ಈ ಅಕ್ರಮ ಬೇಲಿಯನ್ನು ತೆರವುಗೊಳಿಸಿ, ಜಾಗವನ್ನು ಉಳಿಸಿಕೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]