ಶಿವಮೊಗ್ಗ ಸುದ್ದಿ

ನಮ್ಮನೆ ಕಂಬದಿಂದ ಕರೆಂಟ್ ಕೊಡೋಕೆ ನೀವ್ಯಾರು? – ಮೆಸ್ಕಾಂ ಎಇಇ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್!

ಕರ್ತವ್ಯ ನಿರತ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಮೇಲೆ ಹಲ್ಲೆಗೆ ಯತ್ನಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಮುಕ್ತಿಹರಿಹರಪುರ ಸಮೀಪದ ಬಾಳುಗೋಡು ಗ್ರಾಮದಲ್ಲಿ ನಡೆದಿದೆ.

Mescom AEE Video Viral

ತೀರ್ಥಹಳ್ಳಿ : ಕರ್ತವ್ಯ ನಿರತ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ಮೇಲೆ ಹಲ್ಲೆಗೆ ಯತ್ನಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಮುಕ್ತಿಹರಿಹರಪುರ ಸಮೀಪದ ಬಾಳುಗೋಡು ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೆಸ್ಕಾಂ ಎಇಇ ಪ್ರಶಾಂತ್ ಹಲ್ಲೆ ಯತ್ನಕ್ಕೆ ಒಳಗಾದ ಅಧಿಕಾರಿ. ಬಾಳುಗೋಡು ಗ್ರಾಮದ ಮನೆಯೊಂದಕ್ಕೆ ಹೊಸ ವಿದ್ಯುತ್ ಸಂಪರ್ಕ ನೀಡುವ ಸಂಬಂಧ ಪ್ರಶಾಂತ್ ಅವರು ಸ್ಥಳ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ಪಕ್ಕದ ಮನೆಯ ವ್ಯಕ್ತಿಯೊಬ್ಬ ಏಕಾಏಕಿ ಅಧಿಕಾರಿಯೊಂದಿಗೆ ವಾಗ್ವಾದಕ್ಕಿಳಿದಿದ್ದು, “ನಮ್ಮ ಮನೆಯ ಬಳಿಯಿರುವ ವಿದ್ಯುತ್ ಕಂಬದಿಂದ ಬೇರೆಯವರಿಗೆ ಹೇಗೆ ಸಂಪರ್ಕ ನೀಡುತ್ತೀರಿ?” ಎಂದು ಪ್ರಶ್ನಿಸಿ ಗಲಾಟೆ ಆರಂಭಿಸಿದ್ದಾನೆ.

ಮಾತಿಗೆ ಮಾತು ಬೆಳೆದು ಆರೋಪಿಯು ಎಇಇ ಪ್ರಶಾಂತ್ ಅವರನ್ನು ತಳ್ಳಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿದ್ದವರು ಈ ಗಲಾಟೆಯ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಅಧಿಕಾರಿ ಪ್ರಶಾಂತ್ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]