ಹೊಸನಗರ

ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಅರ್ಚನಾಗೆ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದಿಂದ ಸನ್ಮಾನ

HOSANAGARA ; ಪಟ್ಟಣದ ಮಲೆನಾಡು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕು. ಅರ್ಚನಾ ಶಿವಮೊಗ್ಗದಲ್ಲಿ ನಡೆದ 17 ವರ್ಷದೊಳಗಿನ ಕ್ರೀಡಾಕೂಟದಲ್ಲಿ ಮೂರು ಸಾವಿರ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸಂಭ್ರಮಕ್ಕಾಗಿ ಪಟ್ಟಣದ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದವರು ಎಂದು ಮಲೆನಾಡು ಪ್ರೌಢಶಾಲೆ ಆವರಣದಲ್ಲಿ ಕು. ಅರ್ಚನ ರವರನ್ನು ಅಭಿನಂದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

WhatsApp Group Join Now
Telegram Group Join Now
Instagram Group Join Now

ಈ ಸಂದರ್ಭದಲ್ಲಿ ಡಾ. ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ ಸ್ಥಾಪಕ ಅಧ್ಯಕ್ಷ ಪ್ರಶಾಂತ್ ಎಸ್ ಕಳೂರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಡಿ ಆರ್ ವಿನಯ್, ಹಿರಿಯ ಕ್ರೀಡಾಪಟು ಕೆ ಇಲಿಯಾಸ್, ಹಿರಿಯ ಕಲಾವಿದರಾದ ಜಿ.ವಿ. ವೇಣುಗೋಪಾಲ್, ಬಿ.ಎಸ್ ಸುರೇಶ, ಎಂ ಕೆ ವೆಂಕಟೇಶಮೂರ್ತಿ, ಕೆ ಜಿ ನಾಗೇಶ್, ದೀಪಕ್ ಸ್ವರೂಪ್, ನವಶಕ್ತಿ ರಮೇಶ್, ಅರವಿಂದ ಗಣೇಶಗೌಡ, ಮಲೆನಾಡು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸುಧಾಕರ್ ಕ್ರೀಡಾ ಶಿಕ್ಷಕರಾದ ಸುರೇಶ್, ಜ್ಯೋತಿ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದು 3.11 ಅಡಿ ಎತ್ತರದ ಕು. ಅರ್ಚನಾ ರವರ ಸಾಧನೆಯನ್ನು ಕೊಂಡಾಡಿ ರಾಜ್ಯ ಮಟ್ಟದಲ್ಲೂ ಅರ್ಚನಾ ಕ್ರೀಡಾ ಸಾಧನೆ ಸಾಧಿಸಿ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಲಿ ಎಂದು ಹಾರೈಸಿದರು‌.

ಅರ್ಚನಾ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯಾಗಿದ್ದು ಕೊಡಸೆ ಹೆಬ್ಬುರಳಿಯ ಬಡ ಕೃಷಿಕ ಕೃಷ್ಣ ಹಾಗೂ ಕಲಾವತಿ ದಂಪತಿಗಳ ಪುತ್ರಿ. 3 ಸಾವಿರ ಮೀಟರ್ ಓಟವನ್ನು ಕೇವಲ 11.4 ನಿಮಿಷಗಳಲ್ಲಿ ಕ್ರಮಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!