HOSANAGARA ; ಶರನ್ನವರಾತ್ರಿಯ ಮಹಾನವಮಿ ಪ್ರಯುಕ್ತ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಆಯುಧಪೂಜೆ ನಡೆಯಿತು.

ಆರಕ್ಷಕರ ಬೈಕ್, ಜೀಪ್, ಕಾರು ಹಾಗು ವಿವಿಧ ಶಸ್ತ್ರಾಸ್ತ್ರಗಳೊಂದಿಗೆ ಅಗತ್ಯ ದಾಖಲೆ ಪುಸ್ತಕಗಳಿಗೆ ವಿಶೇಷ ಪೂಜೆ ನೆರವೇರಿತು.
ಅರ್ಚಕ ಕೃಷ್ಣಮೂರ್ತಿ ಅವರ ಪೌರೋಹಿತ್ಯ ಹಾಗು ಠಾಣಾ ಸಬ್ ಇನ್ಸ್‌ಪೆಕ್ಟರ್ ಶಂಕರ್ ಗೌಡ ಪಟೇಲ್ ನೇತೃತ್ವದಲ್ಲಿ ನಡೆದ ಪೂಜಾ ಕೈಂಕಾರ್ಯಗಳಲ್ಲಿ ಸಿಬ್ಬಂದಿಗಳಾದ ಗಂಗಾಧರ್, ಸಂದೀಪ್, ಮಹೇಶ್, ವೆಂಕಟೇಶ್, ವೀರೇಶ್, ಮಾಯಪ್ಪ, ತೀರ್ಥೆಶ್, ಆಸ್ಮಾ ಸೇರಿದಂತೆ ಹಲವರು ಹಾಜರಿದ್ದು ಪೂಜಾ ಕಾರ್ಯದಲ್ಲಿ ಸಹಕಾರ ನೀಡಿದರು.


ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.