ಹೊಸನಗರ : ನಾಡಹಬ್ಬ ದಸರಾದ ಶರನ್ನವರಾತ್ರಿ ಪ್ರಯುಕ್ತ ನವಮಿ ದಿನವಾದ ಮಂಗಳವಾರದಂದು ಇಲ್ಲಿನ ಪೊಲೀಸ್ ಠಾಣೆಯಲ್ಲಿ ಅದ್ದೂರಿ ಆಯುಧ ಪೂಜೆ ನೆರವೇರಿತು.
ನಾಡದೇವಿ ಶ್ರೀ ಚಾಮುಂಡೇಶ್ವರಿ ಭಾವಚಿತ್ರಕ್ಕೆ ವಿವಿಧ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು. ಪಿಸ್ತೂಲ್, ಬಂದೂಕು ಹಾಗೂ ಹತ್ತಾರು ಬೈಕ್, ಜೀಪ್, ಕಾರುಗಳಿಗೆ ಸಾಂಪ್ರದಾಯಿಕವಾಗಿ ವಿಶೇಷ ಪೂಜೆ ನಡೆಯಿತು.

ಅರ್ಚಕ ಕೃಷ್ಣಮೂರ್ತಿ ಪೌರೋಹಿತ್ಯದಲ್ಲಿ ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಹಲವು ಗಣ್ಯರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನೆರವೇರಿತು. ಪೂಜೆಗೆ ಆಗಮಿಸಿದ್ದ ಹಲವರಿಗೆ ಫಲಪುಷ್ಪ ಸಹಿತ ಪ್ರಸಾದ ವಿನಿಯೋಗಿಸಲಾಯಿತು.

ಪಿಎಸ್ಐ ಶಂಕರ್ ಗೌಡ ಪಾಟೀಲ್, ನಿವೃತ್ತ ಎಎಸ್ಐ ರತ್ನಾಕರ್ ಗೌಡ, ಸಿಬ್ಬಂದಿಗಳಾದ ವೆಂಕಟೇಶ್, ಮಾಯಣ್ಣ, ಗೋಪಾಲಕೃಷ್ಣ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.