ಹೊಸನಗರ

ಆಗಸ್ಟ್ 11ಕ್ಕೆ ಹೊಸನಗರದಲ್ಲಿ ಆಯುಷ್ ವಿಶೇಷ ಆರೋಗ್ಯ ಶಿಬಿರ – 2026 | ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧಿ ವಿತರಣೆ

ಆಗಸ್ಟ್ 11ಕ್ಕೆ ಹೊಸನಗರದಲ್ಲಿ ಆಯುಷ್ ವಿಶೇಷ ಆರೋಗ್ಯ ಶಿಬಿರ – 2026 | ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧಿ ವಿತರಣೆ – InSh…

ಹೊಸನಗರ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಪಟ್ಟಣ ಪಂಚಾಯತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ಪಟ್ಟಣದ ಬಸ್ ನಿಲ್ದಾಣದ ಸಮೀಪ ಇರುವ ಸಮುದಾಯ ಅಭಿವೃದ್ಧಿ ಕೇಂದ್ರ ಭವನದಲ್ಲಿ ಇದೇ ಆಗಸ್ಟ್ 11ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಸರಿಯಾಗಿ ಆಯುಷ್ ವಿಶೇಷ ಆರೋಗ್ಯ ಶಿಬಿರ – 2026 ಹಮ್ಮಿಕೊಳ್ಳಲಾಗಿದೆ.

WhatsApp Group Join Now
Telegram Group Join Now
Instagram Group Join Now

ತಾಲೂಕಿನ ನುರಿತ ಆಯುಷ್ ವೈದ್ಯರಾದ ಡಾ. ಕೆ.ವಿ. ಪತಂಜಲಿ, ಡಾ. ಜಿ.ಎಂ.ಹರೀಶ್, ಡಾ. ಪ್ರತಿಮಾ ಹಾಗೂ ಡಾ. ಪ್ರದೀಪ್ ಕುಮಾರ್ ಸೇರಿದಂತೆ ಹಲವು ಆಯುಷ್ ವೈದ್ಯರು ಶಿಬಿರದಲ್ಲಿ ಭಾಗವಹಿಸಿ, ರಕ್ತದೊತ್ತಡ, ಮಧುಮೇಹ, ಸಂಧು ಕೀಲುಗಳ ನೋವು, ಚರ್ಮದ ಕಾಯಿಲೆ, ಅಲರ್ಜಿ, ಕೆಮ್ಮು, ಉಸಿರಾಟದ ಸಮಸ್ಯೆ, ಸ್ತ್ರೀ ರೋಗ ಸೇರಿದಂತೆ ಇತರೆ ಕಾಯಿಲೆಗಳ ತಪಾಸಣೆ, ಚಿಕಿತ್ಸೆ ಮತ್ತು ಉಚಿತ ಔಷಧಿ ವಿತರಣೆ ಮಾಡಲಿದ್ದಾರೆ.

ಪಟ್ಟಣ ಪಂಚಾಯತಿ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಆಟೋ ಚಾಲಕರು ಸೇರಿದಂತೆ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯುವಂತೆ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಎಂ.ಎನ್. ಹರೀಶ್ ಕೋರಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!