ಹೊಸನಗರ ; ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ಚಂದ್ರಮೌಳಿ ಅವರ ತಾಯಿ ಗಿರಿಜಮ್ಮ (90) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮಧ್ಯಾಹ್ನ 12 ಗಂಟೆಗೆ ತಮ್ಮ ಸ್ವಗೃಹ ಗೌಡಕೊಪ್ಪದಲ್ಲಿ ಲಿಂಗೈಕ್ಯರಾದರು.
ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕೋಡೂರಿನ ಗೌಡಕೊಪ್ಪ ಅವರ ಜಮೀನಿನಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
ಸಂತಾಪ ;
ಗಿರಿಜಮ್ಮರ ನಿಧನಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿ.ಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಶ್ರೀಗಳು ಸೇರಿದಂತೆ ಕಾಂಗ್ರೆಸ್ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.

