ತೀರ್ಥಹಳ್ಳಿ ; ತಾಲೂಕು ಯುವ ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಅವರು ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಇಂದು ಪಟ್ಟಣದ ಸೀಬಿನಕೆರೆಯ ಅವರ ನಿವಾಸಕ್ಕೆ ಮಾಜಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ ಹುಂಚದಕಟ್ಟೆ, ತಾಲೂಕು ಕಾಂಗ್ರೆಸ್ ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ, ತೀರ್ಥಹಳ್ಳಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಪೂರ್ಣೇಶ್ ಕೆಳಕೆರೆ, ಗ್ರಾಮೀಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವೀಶ್ ಹೊಸಕೆರೆ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಅಮರನಾಥ್ ಶೆಟ್ಟಿ, ಯುವ ಕಾಂಗ್ರೆಸ್ ಪ್ರಮುಖರಾದ ಫಣಿರಾಜ್ ಕಟ್ಟೆಹಕ್ಕಲು, ಜಯಕರ ಶೆಟ್ಟಿ, ಆಸೀಫ್ ಸೀಬಿನಕೆರೆ, ಸುಭಾಷ್ ಕುಲಾಲ್, ಶೋಬಿತ್ ಬಾಳಗಾರು, ನದೀಂ ಬೆಟ್ಟಮಕ್ಕಿ, ರಾಘವೇಂದ್ರ ಸೀಬಿನಕೆರೆ, ಪ್ರಸನ್ನ, ಧ್ರುವಕುಮಾರ್, ಮಂಜು (ಗೂಗ್ಲಿ), ನಂದ ಹಾರೇಕೊಪ್ಪ ಸೇರಿದಂತೆ ಕುಟುಂಬಸ್ಥರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.