B Y Raghavendra :ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಸ್ಥಾನಗಳಲ್ಲಿ ಬಿಜೆಪಿ 17 ಮತ್ತು ಜೆಡಿಎಸ್ ಎರಡು ಸ್ಥಾನಗಳನ್ನು ಗೆದ್ದಿದೆ . ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸೀಟು ಹಂಚಿಕೆಯೊಂದಿಗೆ ಚುನಾವಣೆ ಎದುರಿಸಬೇಕಾಯಿತು.
ನರೇಂದ್ರ ಮೋದಿ 3.0 ಸರ್ಕಾರದಲ್ಲಿ ರಾಜ್ಯಕ್ಕೆ ಎಷ್ಟು ಸಚಿವ ಸ್ಥಾನಗಳು ಸಿಗುತ್ತವೆ ಎಂಬುದು ಚರ್ಚೆಯ ವಿಷಯವಾಗಿದೆ. ನರೇಂದ್ರ ಮೋದಿ 2.0 ಸರ್ಕಾರದಲ್ಲಿ ಸಚಿವರಾಗಿದ್ದ ಪ್ರಹ್ಲಾದ್ ಜೋಶಿ ಮತ್ತು ಶೋಭಾ ಕರಂದ್ಲಾಜೆ ಈ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು 7,78,721 ಮತಗಳನ್ನು ಪಡೆದು ಕಾಂಗ್ರೆಸ್‌ನ ಗೀತಾ ಶಿವರಾಜ್ ಕುಮಾರ್ ಅವರನ್ನು 2,43,715 ಮತಗಳ ಅಂತರದಿಂದ ಸೋಲಿಸಿದ್ದಾರೆ. ಬಿ.ವೈ.ರಾಘವೇಂದ್ರ ಅವರು ನಾಲ್ಕನೇ ಬಾರಿಗೆ ಲೋಕಸಭೆಗೆ ಆಯ್ಕೆಯಾದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಕೇಂದ್ರ ಸಂಸದೀಯ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಇದು ಬಿಜೆಪಿ ಪಕ್ಷದ ಅತ್ಯುನ್ನತ ಅಂಗವಾಗಿದೆ. ಮತ್ತು 2023 ರ ಸಾರ್ವತ್ರಿಕ ಚುನಾವಣೆಯ ನಂತರ ಬಿಜೆಪಿಯ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಿಸಲಾಗಿದೆ. ಯಡಿಯೂರಪ್ಪ ಕುಟುಂಬದ ಇಬ್ಬರು ಈಗಾಗಲೇ ಪಕ್ಷದ ಪ್ರಮುಖ ಹುದ್ದೆ ಅಲಂಕರಿಸಿರುವ ಹಿನ್ನೆಲೆಯಲ್ಲಿ ಬಿ.ವೈ. ರಾಘವೇಂದ್ರಗೆ ಸಚಿವ ಸ್ಥಾನ ಸಿಗುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಬಿವೈಆರ್‌ಗೆ ಸಚಿವ ಸ್ಥಾನ ಸಿಗಲಿದೆ ಎನ್ನಲಾಗಿತ್ತು ಆದರೆ ತಂದೆ ಬಿ.ಎಸ್. ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿ ನೇಮಕವಾದ ನಂತರ , ಸಚಿವ ಸ್ಥಾನ ಕೈ ತಪ್ಪಿತು. ಇದಾದ ಬಳಿಕ ಅವರಿಗೆ ಸಚಿವ ಸ್ಥಾನ ಸಿಗಲಿಲ್ಲ.
ಈ ಬಾರಿ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು,ಆದರೆ ಬಿಜೆಪಿಗೆ ಸಂಪೂರ್ಣ ಬಹುಮತವಿಲ್ಲದ ಕಾರಣ ಮತ್ತು ಎನ್‌ಡಿಎ ಮಿತ್ರಪಕ್ಷಗಳತ್ತ ಹೆಚ್ಚಿನ ಗಮನ ಹರಿಸಬೇಕಾದ ಅನಿವಾರ್ಯತೆ ಇರುವುದರಿಂದ, ಸಂಪುಟದಲ್ಲಿರುವ ಬಿಜೆಪಿ ಸದಸ್ಯರಿಗೆ ಹೆಚ್ಚಿನ ಅವಕಾಶಗಳು ಸಿಗದೇ ಇರಬಹುದು. ಹೀಗಾಗಿ ಮೋದಿ 3.0 ಸರ್ಕಾರದಲ್ಲಿ ಬಿವೈ ರಾಘವೇಂದ್ರ ಸಚಿವರಾಗಲು ಸಾಧ್ಯವೇ? ಇಲ್ಲವೇ ?ಎಂಬುದನ್ನ ಕಾದು ನೋಡಬೇಕಾಗಿದೆ.
Read More
Karnataka Rain | ಬೆಳೆಗೆ ಜೀವ ಕಳೆ ತಂದ ಮಳೆ, ಸಂತಸದಲ್ಲಿ ರೈತಾಪಿ ವರ್ಗ
ನೈಋತ್ಯ ಪದವೀಧರರ ಚುನಾವಣೆ ಫಲಿತಾಂಶ | ಮೈತ್ರಿ ಅಭ್ಯರ್ಥಿ ಡಾ. ಧನಂಜಯ ಸರ್ಜಿಗೆ ಭರ್ಜರಿ ಗೆಲುವು