HOSANAGARA ; ತಾಲ್ಲೂಕಿನ ಮುಳುಗುಡ್ಡೆ ಗ್ರಾಮದಲ್ಲಿ ದನದ ಕಳೆಬರಹವಿರುವ ಚೀಲ ಪತ್ತೆಯಾದ ಘಟನೆ ನಡೆದಿದೆ.
ಯಾರೋ ಕಿಡಿಗೇಡಿಗಳು ದನವನ್ನು ಕಡಿದು ಅದರ ತಲೆಯನ್ನು ಚೀಲದಲ್ಲಿ ತುಂಬಿ ಈ ಗ್ರಾಮದಲ್ಲಿ ಬೀಸಾಕಿರುವ ಶಂಕೆ ವ್ಯಕ್ತವಾಗಿದೆ.

ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಶಂಕರ್ ಗೌಡ ಪಾಟೀಲ್ ಹಾಗೂ ಸಿಬ್ಬಂದಿಗಳು ಸ್ಥಳ ಮಹಜರು ನಡೆಸಿ ಕೇಸ್ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಆರೋಪಿಗಳನ್ನು ತಕ್ಷಣ ಬಂಧಿಸಿ ;
ಹೊಸನಗರ ತಾಲ್ಲೂಕು ಶಾಂತಿಪ್ರಿಯ ತಾಲ್ಲೂಕಾಗಿದ್ದು ಈ ಮಲೆನಾಡು ಭಾಗದಲ್ಲಿ ಇತ್ತಿಚಿನ ದಿನಗಳಲ್ಲಿ ರಾತ್ರಿ ವೇಳೆಯಲ್ಲಿ ದನಗಳ ಕಳ್ಳತನ ದಂಧೆ ನಡೆಯುತ್ತಿದೆ. ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಗೂ ಆಗಾಗ ತಿಳಿಯುತ್ತಿದ್ದು ಆದರೆ ಅಪರಾಧಿಗಳು ಪೊಲೀಸರ ಕೈಗೆ ಸಿಗದಂತೆ ತಪ್ಪಿಸಿಕೊಳ್ಳುತ್ತಿದ್ದಾರೆ. ತಕ್ಷಣ ದನ ಕಳ್ಳರನ್ನು ಪತ್ತೆಹಚ್ಚಿ ಅವರಿಗೆ ಶಿಕ್ಷೆ ನೀಡಿದರೆ ಈ ದಂಧೆಗೆ ಬ್ರೇಕ್ ಹಾಕಬಹುದು. ಇಲ್ಲವಾದರೇ ಮುಂದಿನ ದಿನದಲ್ಲಿ ನಾವೇ ಅಕ್ರಮ ದನದ ದಂಧೆಕೋರರಿಗೆ ಬುದ್ಧಿ ಕಲಿಸಬೇಕಾಗುತ್ತದೆೆಂದು ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಸಂಜೀವ ದನ ಕಳ್ಳರಿಗೆ ಎಚ್ಚರಿಕೆ ನೀಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.