Crime News

ಹೊಸನಗರ ; ದನದ ಕಳೆಬರಹವಿರುವ ಚೀಲ ಪತ್ತೆ !

HOSANAGARA ; ತಾಲ್ಲೂಕಿನ ಮುಳುಗುಡ್ಡೆ ಗ್ರಾಮದಲ್ಲಿ ದನದ ಕಳೆಬರಹವಿರುವ ಚೀಲ ಪತ್ತೆಯಾದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಯಾರೋ ಕಿಡಿಗೇಡಿಗಳು ದನವನ್ನು ಕಡಿದು ಅದರ ತಲೆಯನ್ನು ಚೀಲದಲ್ಲಿ ತುಂಬಿ ಈ ಗ್ರಾಮದಲ್ಲಿ ಬೀಸಾಕಿರುವ ಶಂಕೆ ವ್ಯಕ್ತವಾಗಿದೆ.

ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಶಂಕರ್ ಗೌಡ ಪಾಟೀಲ್ ಹಾಗೂ ಸಿಬ್ಬಂದಿಗಳು ಸ್ಥಳ ಮಹಜರು ನಡೆಸಿ ಕೇಸ್ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಆರೋಪಿಗಳನ್ನು ತಕ್ಷಣ ಬಂಧಿಸಿ ;

ಹೊಸನಗರ ತಾಲ್ಲೂಕು ಶಾಂತಿಪ್ರಿಯ ತಾಲ್ಲೂಕಾಗಿದ್ದು ಈ ಮಲೆನಾಡು ಭಾಗದಲ್ಲಿ ಇತ್ತಿಚಿನ ದಿನಗಳಲ್ಲಿ ರಾತ್ರಿ ವೇಳೆಯಲ್ಲಿ ದನಗಳ ಕಳ್ಳತನ ದಂಧೆ ನಡೆಯುತ್ತಿದೆ. ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಗೂ ಆಗಾಗ ತಿಳಿಯುತ್ತಿದ್ದು ಆದರೆ ಅಪರಾಧಿಗಳು ಪೊಲೀಸರ ಕೈಗೆ ಸಿಗದಂತೆ ತಪ್ಪಿಸಿಕೊಳ್ಳುತ್ತಿದ್ದಾರೆ. ತಕ್ಷಣ ದನ ಕಳ್ಳರನ್ನು ಪತ್ತೆಹಚ್ಚಿ ಅವರಿಗೆ ಶಿಕ್ಷೆ ನೀಡಿದರೆ ಈ ದಂಧೆಗೆ ಬ್ರೇಕ್ ಹಾಕಬಹುದು. ಇಲ್ಲವಾದರೇ ಮುಂದಿನ ದಿನದಲ್ಲಿ ನಾವೇ ಅಕ್ರಮ ದನದ ದಂಧೆಕೋರರಿಗೆ ಬುದ್ಧಿ ಕಲಿಸಬೇಕಾಗುತ್ತದೆೆಂದು ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಸಂಜೀವ ದನ ಕಳ್ಳರಿಗೆ ಎಚ್ಚರಿಕೆ ನೀಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>