Ripponpete

ಮಣ್ಣಿನ ಆರೋಗ್ಯ ಕಾಪಾಡಲು ಸಮತೋಲನ ಗೊಬ್ಬರ ಬಳಕೆ ಅಗತ್ಯ ; ರವಿಕುಮಾರ್

ರಿಪ್ಪನ್‌ಪೇಟೆ : ಮಣ್ಣಿನ ಅರೋಗ್ಯ ಕಾಪಾಡಲು ಸಮತೋಲನ ಗೊಬ್ಬರಗಳ ಬಳಕೆ ಅಗತ್ಯ ಎಂದು ಹುಂಚ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದ ತಾಂತ್ರಿಕ ವ್ಯವಸ್ಥಾಪಕ ರವಿಕುಮಾರ್ ರೈತರಿಗೆ ಸಲಹೆ ನೀಡಿದರು.

WhatsApp Group Join Now
Telegram Group Join Now
Instagram Group Join Now

ಹೊಸನಗರ ಕೃಷಿ ಇಲಾಖೆಯಿಂದ ಅಮೃತ (ಗರ್ತಿಕೆರೆ) ಗ್ರಾಮದಲ್ಲಿ ನಡೆದ ಖೇತ್ ಬಚಾವೋ ಕಾರ್ಯಕ್ರಮದ ಜಾಗೃತಿ ಆಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ರೈತರು ಇಂದು ಅಸಮರ್ಪಕ ರಾಸಾಯನಿಕ ಗೊಬ್ಬರ ಬಳಕೆಯಿಂದ ಭೂಮಿಯ ಆರೋಗ್ಯ ಹಾಳಾಗುತ್ತಿದ್ದು ರೈತರು ಮಣ್ಣು ಪರೀಕ್ಷೆ ಆಧಾರದ ಮೇಲೆ ಬೆಳೆಗಳಿಗೆ ಪೂರಕವಾದ ಗೊಬ್ಬರಗಳ ಬಳಕೆ ಜೊತೆಗೆ ಸಾವಯವ ಗೊಬ್ಬರಗಳನ್ನು ಬಳಸಬೇಕು. ಅದೇ ರೀತಿ ಡಿ.ಎ.ಪಿ. ಹಾಗೂ ಯೂರಿಯ ಗೊಬ್ಬರದ ಬಳಕೆಯನ್ನು ಕಡಿಮೆ ಮಾಡಿ ಸಂಯುಕ್ತ ಗೊಬ್ಬರಗಳ ಬಳಕೆ ಮಾಡಬೇಕು ಎಂದು ರೈತರಿಗೆ ಸವಿಸ್ತಾರವಾಗಿ ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಕೃಷಿಕ ಸಮಾಜದ ನಿರ್ದೇಶಕ ಸೋಮಶೇಖರ ತಾರಿಗ, ವೆಂಕಟೇಶ್ವರ ಟ್ರೇಡರ್ಸ್ ಮಾಲೀಕ ಕಿರಣ್, ಶಿವಟ್ರೇಡರ್ಸ್ ಶಿವರಾಜ್ ಹಾಗೂ ನೂರಾರು ರೈತರು ಪಾಲ್ಗೊಂಡಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]