Ripponpete

ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾದ ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರ ; ಸಾರ್ವಜನಿಕರ ಪ್ರತಿಭಟನೆ

ರಿಪ್ಪನ್‌ಪೇಟೆ ; ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರದಲ್ಲಿ ಸಮುದಾಯ ಆರೋಗ್ಯಾಧಿಕಾರಿ ಇಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಆರೋಪಿಸಿ ಬಾಳೂರು ಸಾರ್ವಜನಿಕ ಹೋರಾಟ ಸಮಿತಿಯ ಮಂಜುನಾಥ ಆಚಾರ್ ನೇತೃತ್ವದಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತ್ ಎದುರು ಪ್ರತಿಭಟನೆ ನಡೆಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೋರಾಟಗಾರ ನೆವಟೂರು ಮಂಜುನಾಥ ಆಚಾರ್ ಮಾತನಾಡಿ, ಇಲ್ಲಿ ಸಾರ್ವಜನಿಕರ ಅನುಕೂಲಕ್ಕೆಂದು ಉಪಕೇಂದ್ರ ತೆರೆದಿರುವುದು ನೆಪ ಮಾತ್ರಕ್ಕೆ ಎನ್ನುವಂತಾಗಿದೆ. ದಿನದ ಬಹುತೇಕ ಸಮಯ ಕಛೇರಿಯ ಬೀಗ ಜಡಿದಿದ್ದು ಸಿಬ್ಬಂದಿ ನಾಪತ್ತೆಯಾಗಿರುತ್ತಾರೆ. ಇದರಿಂದ ಬೇರೆ ಊರುಗಳಿಗೆ ರೋಗಿಗಳು ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯ್ತಿಗೆ ಮತ್ತು ಮೇಲಾಧಿಕಾರಿಗಳಿಗೆ ಲಿಖಿತವಾಗಿ ದೂರು ನೀಡಲಾದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಗ್ರಾಮ ಪಂಚಾಯ್ತಿ ಸಾಮಸ್ಯ ಸಭೆಯಲ್ಲಿ ಸಹ ಚರ್ಚಿಸಲಾಗಿ ತುರ್ತಾಗಿ ಇಲ್ಲಿನ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಸಮುದಾಯ ಆರೋಗ್ಯಾಧಿಕಾರಿಯನ್ನು ನಿಯೋಜಿಸುವಂತೆ ನಿರ್ಣಯ ಕೈಗೊಳ್ಳುವುದರ ಮೂಲಕ ಇಲ್ಲಿನ ಸಾರ್ವಜನಿಕರಿಗೆ ಆಗುತ್ತಿರುವ ಅನಾಕೂಲವನ್ನು ಪರಿಹರಿಸುವಂತೆ ಪಂಚಾಯಿತ್ ಸಭೆಯಲ್ಲಿ ನಿರ್ಣಯ ಕೈಗೊಂಡು ಸಂಬಂಧಿಸಿದವರ ಗಮನಕ್ಕೆ ತರಲಾದರೂ ಕೂಡಾ ಇಲಾಖೆಯವರು ನಿರ್ಲಕ್ಷ್ಯ ವಹಸಿದ್ದಾರೆಂದು ಗ್ರಾಮಾಧ್ಯಕ್ಷ ಶ್ರೀನಿವಾಸ್ ಆಚಾರ್ ಮಾಧ್ಯಮದವರಿಗೆ ವಿವರಿಸಿದರು.

ಪ್ರತಿಭಟನಾ ನಿರತರು ಬಾಳೂರು ಪ್ರಾಥಮಿಕ ಆರೋಗ್ಯ ಉಪಕೇಂದ್ರದಿಂದ ಮೆರವಣಿಗೆ ಹೊರಟು ಗ್ರಾಮ ಪಂಚಾಯಿತ್‌ವರೆಗೆ ಆರೋಗ್ಯ ಇಲಾಖೆಯ ತಾಲ್ಲೂಕು ಆರೋಗ್ಯಾಧಿಕಾರಿಗಳ ಮತ್ತು ಡಿಹೆಚ್‌ಓ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಪಂಚಾಯಿತ್ ಮುಂಭಾಗ ಪ್ರತಿಭಟನೆ ನಡೆಸಿ ಇನ್ನೂ ಒಂದು ವಾರದೊಳಗೆ ಬಾಳೂರು ಪ್ರಾಥಮಿಕ ಆರೋಗ್ಯ ಉಪ ಕೇಂದ್ರಕ್ಕೆ ಸಮುದಾಯ ಆರೋಗ್ಯ ಕಾರ್ಯಕರ್ತೆಯನ್ನು ನೇಮಿಸದಿದ್ದಲ್ಲಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಹೋರಾಟಗಾರ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ, ರೈತ ಮುಖಂಡ ಕುಕ್ಕಳಲೇ ಈಶ್ವರಪ್ಪಗೌಡ, ಬಾಳೂರು ಚಂದ್ರಶೇಖರಗೌಡ, ರಾಮಚಂದ್ರಗೌಡ ನೆವಟೂರು, ಸಂಜುಗೌಡ,
ಚನ್ನಪ್ಪ, ಗಜೇಂದ್ರ, ಮಹೇಂದ್ರ, ಸತೀಶ್, ಗಣೇಶ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಗ್ರಾಮಾಧ್ಯಕ್ಷ ಶ್ರೀನಿವಾಸ ಆಚಾರ್ ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮೇಲಾಧಿಕಾರಿಗಳಿಗೆ ಕಳುಹಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>